LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭತ್ತದ ಸಸಿ ನಾಟಿ ಮಾಡುವ ವೇಳೆ ಸಿಡಿಲು ಬಡಿದು 15 ಮಹಿಳೆಯರಿಗೆ ಗಾಯ.!

 

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತದ ಸಸಿ ನಾಟಿ ಮಾಡುವ ವೇಳೆ ಸಿಡಿಲು ಬಡಿದು 15 ಮಹಿಳೆಯರು ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕೆ.ಬಿ. ಚಂದ್ರು ಎಂಬವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ಭತ್ತದ ಸಸಿ ನಾಟಿ ಮಾಡುತ್ತಿದ್ದರು. ಈ ವೇಳೆ ದಿಢೀರನೆ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು. ಸಿಡಿಲು ಬಡಿದು 15 ಮಹಿಳೆಯರಿಗೆ ಗಾಯಗಳಾಗಿವೆ.

ಸಿಡಿಲು ಬಡಿದು ಲತಾ(35) ಎಂಬುವರ ಸ್ಥಿತಿ ಗಂಭೀರವಾಗಿದ್ದು, ಗಾಯಗೊಂಡ ಎಲ್ಲಾ ಮಹಿಳೆಯರನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST