LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತದಲ್ಲೇ ಪ್ರತ್ಯೇಕ ಖಲಿಫಾ ರಾಜ್ಯ ಸ್ಥಾಪನೆ ಸಂಚು - 14 ಆರೋಪಿಗಳು ಅರೆಸ್ಟ್

ನವದೆಹಲಿ : ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕವನ್ನು ಭೇದಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ 14 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಭೇದಿಸಲಾದ ಮಾಡ್ಯೂಲ್‌ಗೆ ಜಾರ್ಖಂಡ್‌ನ ರಾಂಚಿಯ ಡಾ। ಇಶ್ತಿಯಾಕ್ ಎಂಬಾತ ನೇತೃತ್ವ ವಹಿಸಿದ್ದ, ಇದು ‘ಖಿಲಾಫತ್’ ಅಂದರೆ ಬಂಡಾಯ ಸಾರಿ ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಘೋಷಿಸಲು ಮತ್ತು ದೇಶದೊಳಗೆ ಗಂಭೀರ ಭಯೋತ್ಪಾದಕ ಚಟುವಟಿಕೆಗಳನ್ನು ಕಾರ್ಯಗತಗೊಳಿಸುವ ಉದ್ದೇಶ ಹೊಂದಿದ್ದ ಗುಂಪು ಎಂದು ದಿಲ್ಲಿ ಪೊಲೀಸರು ಹೇಳಿದ್ದಾರೆ.

ಸಂಘಟನೆಯ ಸದಸ್ಯರಿಗೆ ಶಸ್ತ್ರಾಸ್ತ್ರಗಳನ್ನು ನಿರ್ವಹಿಸುವುದು ಸೇರಿದಂತೆ ವಿವಿಧ ಉಗ್ರ ಚಟುವಟಿಕೆಯ ತರಬೇತಿ ನೀಡಲಾಗುತ್ತಿತ್ತು ಎಂದೂ ಅವರು ತಿಳಿಸಿದ್ದಾರೆ. ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ