LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತದಿಂದ ಕದ್ದ 100ಕ್ಕೂ ಹೆಚ್ಚು ಪುರಾತನ ವಸ್ತುಗಳನ್ನು ಹಿಂದಿರುಗಿಸಲು ಅಮೆರಿಕ ನಿರ್ಧಾರ: ಪ್ರಧಾನಿ ಮೋದಿ

ವಾಷಿಂಗ್ಟನ್: ಭಾರತದಿಂದ ಕದ್ದ 100ಕ್ಕೂ ಹೆಚ್ಚು ಪುರಾತನ ವಸ್ತುಗಳನ್ನು ಹಿಂದಿರುಗಿಸಲು ಅಮೆರಿಕ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದ ಕೊನೆಯ ದಿನದಂದು ಹೇಳಿದ್ದಾರೆ. ಅಮೆರಿಕದ ರೊನಾಲ್ಡ್ ರೇಗನ್ ಸೆಂಟರ್‌ನಲ್ಲಿ ಅನಿವಾಸಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಮೆರಿಕ ಸರ್ಕಾರದ ನಿರ್ಧಾರಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. 'ಭಾರತದಿಂದ ಕಳುವಾಗಿದ್ದ ಈ ಪುರಾತನ ವಸ್ತುಗಳು ಅಂತರರಾಷ್ಟ್ರೀಯ ಮಾರುಕಟ್ಟೆಯನ್ನು ಪ್ರವೇಶಿಸಿದ್ದವು. ಇವುಗಳನ್ನೆಲ್ಲಾ ವಾಪಸ್ ನೀಡಲು ನಿರ್ಧರಿಸಿರುವ ಅಮೆರಿಕ ಸರ್ಕಾರಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಪುರಾತನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸುವ ಅಮೆರಿಕದ ನಿರ್ಧಾರವು ಎರಡು ರಾಷ್ಟ್ರಗಳ ನಡುವಿನ ಭಾವನಾತ್ಮಕ ಬಾಂಧವ್ಯವನ್ನು ತೋರಿಸುತ್ತದೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ ಈ ಪುರಾತನ ವಸ್ತುಗಳ ವಿಷಯವಾಗಿ ಜಾಗತಿಕ ಮಟ್ಟದ ನಾಯಕರೊಂದಿಗೆ ಹಲವು ಸಂದರ್ಭಗಳಲ್ಲಿ ಚರ್ಚಿಸಿದ್ದು, ಈ ವರೆಗೂ ಇಂತಹ ಅಪರೂಪದ 251 ಪ್ರಾಚೀನ ವಸ್ತುಗಳನ್ನು ವಾಪಸ್ ತರಲಾಗಿದ್ದು, ಈ ಪೈಕಿ 2014 ರಿಂದ ಈ ವರೆಗೂ 238 ವಸ್ತುಗಳನ್ನು ವಾಪಸ್ ತರಲಾಗಿದೆ. 2022 ರಲ್ಲಿ ಅಮೇರಿಕಾ ಅಧಿಕಾರಿಗಳು ಭಾರತಕ್ಕೆ ಸಂಬಂಧಿಸಿದ 307 ಪುರಾತನ ವಸ್ತುಗಳನ್ನು ವಾಪಸ್ ನೀಡಿದ್ದರು. ಕಳ್ಳಸಾಗಣೆ ಜಾಲದಿಂದ ವಶಕ್ಕೆ ಪಡೆಯಲಾಗಿದ್ದ ಇದರ ಮೌಲ್ಯ 4 ಮಿಲಿಯನ್ ಯುಎಸ್ ಡಿ ಆಗಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟ