LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಭಾರತವನ್ನು ವಿಶ್ವದ 3ನೇ ಆರ್ಥಿಕ ಶಕ್ತಿಯನ್ನಾಗಿ ಮಾಡುತ್ತೇವೆ '- ಮೋದಿ ಭರವಸೆ

ನವದೆಹಲಿ: ಇಂದು ಕೂಡ ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿಪಕ್ಷಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಉತ್ತರ ನೀಡುತ್ತಿದ್ದಾರೆ. ಕಳೆದ ಎರಡು ದಿನಗಳಲ್ಲಿ 70 ಸಂಸದರು ವಿಚಾರ ಮಂಡಿಸಿದ್ದಾರೆ. ಚರ್ಚೆಯಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ಬಹು ದಶಕಗಳ ಬಳಿಕ ಒಂದೇ‌ ಸರ್ಕಾರಕ್ಕೆ ಮೂರನೇ ಬಾರಿಗೆ ಅವಕಾಶ ನೀಡಲಾಗಿದೆ. 10 ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಬರುವುದು ಸಾಮಾನ್ಯ ವಿಚಾರವಲ್ಲ ಎಂದು ಹೇಳಿದರು.

ಅಂಬೇಡ್ಕರ್ ಸಂವಿಧಾನದ ಪರಿಣಾಮ ನಾವು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ. ಮತ್ತೆ ಗೆದ್ದು ಬರಲು ಸಾಧ್ಯವಾಗಿದೆ. ಸಂವಿಧಾನ ಕೇವಲ ಪುಸ್ತಕವಲ್ಲ, ಸ್ಫೂರ್ತಿಯ ಸಂಕೇತವಾಗಿದೆ. ಸಂವಿಧಾನ ನಮಗೆ ಮಾರ್ಗದರ್ಶನ ನೀಡುತ್ತದೆ. ಕೆಲವರು ಸಂವಿಧಾನ ಪುಸ್ತಕ ಹಿಡಿದು ಮಾತ್ರ ತಿರುಗುತ್ತಾರೆ ಎಂದು ವಿಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.

ಸಂವಿಧಾನ ದಿವಸ ಆಚರಣೆಯನ್ನು ನಾವು ತಂದಿದ್ದೇವೆ. ಶಾಲಾ-ಕಾಲೇಜುಗಳಿಗೆ ಸಂವಿಧಾನದ ಮಹತ್ವ ತಿಳಿಸಲಾಗುತ್ತಿದೆ. ಸಂವಿಧಾನ ನಮಗೆ ನಂಬಿಕೆಯ ಭಾಗ ಮತ್ತು ಪ್ರೇರಣೆಯಾಗಿದೆ. 75 ನೇ ವರ್ಷಾಚರಣೆಯನ್ನು ನಾವು ಉತ್ಸವವಾಗಿ ಆಚರಣೆ ಮಾಡಿದ್ದೇವೆ. ಮೂರನೇ ಬಾರಿ ನಮಗೆ ಅವಕಾಶ ನೀಡಿ ದೇಶದ ಜನ ಆಶೀರ್ವಾದ ಮಾಡಿದ್ದಾರೆ ಎಂದರು.

ಈ ವೇಳೆ ಕಾಂಗ್ರೆಸ್‌ ಮಲ್ಲಿಕಾರ್ಜುನ ಖರ್ಗೆಯವರು ಮೋದಿ ಸುಳ್ಳು ಹೇಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿ ಘೋಷಣೆಗಳನ್ನು ಕೂಗಿದರು. ಮಾತು ಮುಂದುವರಿಸಿದ ಮೋದಿ, ನಮ್ಮ ಆರ್ಥಿಕತೆಯನ್ನು 10 ರಿಂದ ಐದನೇ ಸ್ಥಾನಕ್ಕೆ ತಂದಿದ್ದೇವೆ. ಮೂರನೇ ಆರ್ಥಿಕ ಶಕ್ತಿಯಾಗಿ ರೂಪಿಸಲು ನಮಗೆ ಜನರು ಮತ್ತೆ ಗೆಲ್ಲಿಸಿದ್ದಾರೆ. ಮುಂದೆ ವಿಶ್ವದ 3ನೇ ಆರ್ಥಿಕ ಶಕ್ತಿಯನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದರು

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!