E-PAPER
17 Nov 2026, 12:18:32 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಭಾರತೀಯ ಹಬ್ಬಗಳ ಮೂಲ ಆಶಯವೇ ಪರಿಸರ ಸಂರಕ್ಷಣೆ :ಮಂಜುನಾಥ ಶರಣಪ್ಪನವರ

ಬೆಳಗಾವಿ-೦೩:ಭಾರತೀಯ ಹಬ್ಬಗಳು ಪರಿಸರವನ್ನು ಪೂಜಿಸಿ ಅದರ ಪ್ರಾಮುಖ್ಯತೆಯನ್ನು ಜನಸಾಮಾನ್ಯರಿಗೆ ತಿಳಿಸುವಂತಹವು. ಮಣ್ಣು, ನೀರು, ಗಾಳಿ ಇವುಗಳಲ್ಲಿ ದೈವವನ್ನು ಕಾಣುವ ಕಾಣುವ ಭಾರತೀಯ ಹಬ್ಬಗಳ ಮೂಲ ಆಶಯವೇ ಪರಿಸರ ಸಂರಕ್ಷಣೆ ಎಂದು ಎಸ್.ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಮಂಜುನಾಥ ಶರಣಪ್ಪನವರ ಅಭಿಪ್ರಾಯಪಟ್ಟರು‌. ಅವರು ಇಂದು ಶಿವಬಸವ ನಗರದ ಸಿದ್ಧರಾಮೇಶ್ವರ ಸಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಅಟಲ್ ಟಿಂಕರಿಂಗ್ ಲ್ಯಾಬ್ ನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಡಾ. ಸ. ಜ. ನಾಗಲೋಟಿಮಠ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ "ಪರಿಸರ ಸ್ನೇಹಿ ಗಣೇಶೋತ್ಸವ"ದ ಜಾಗೃತಿ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸ ನೀಡುತ್ತಾ ಮಾತನಾಡಿದರು. ಮುಂದುವರೆದು ಮಾತನಾಡಿದ ಅವರು ಹಬ್ಬಗಳ ಆಚರಣೆಯ ನೆಪದಲ್ಲಿ ಜನತೆ ಪರಿಸರ ಮಾಲಿನ್ಯ ಮಾಡುತ್ತ ಅವುಗಳ ಪ್ರಾಮುಖ್ಯತೆ ಕಡಿಮೆ ಮಾಡಬಾರದು. ಗಣೇಶೋತ್ಸವ ಮಣ್ಣನ್ನು ಪೂಜಿಸುವ ಹಾಗು ಜನತೆಯಲ್ಲಿ ರಾಷ್ಟ್ರೀಯತೆಯ ಭಾವವನ್ನು ಬಿಂಬಿಸುವ ವಿಶೇಷ ಹಬ್ಬ. ಈ ಸಂದರ್ಭದಲ್ಲಿ ಪಿಓಪಿ ಹಾಗೂ ಮಾಲಿನ್ಯಯುಕ್ತ ಬಣ್ಣ ಗಳಿಂದ ತಯಾರಿಸಿದ ಗಣೇಶನ ವಿಗ್ರಹಗಳನ್ನು ಪೂಜಿಸದೆ ಜೇಡಿಮಣ್ಣಿನಿಂದ ತಯಾರಿಸಿದ ವಿಗ್ರಹಗಳನ್ನು ಆರಾಧಿಸಬೇಕು. ವಿಸರ್ಜನೆಯ ಸಂದರ್ಭದಲ್ಲಿ ಜಲ ಮೂಲಗಳನ್ನು ಮಲಿನಗೊಳಿಸದೆ ಸರ್ಕಾರ ನಿಗದಿಗೊಳಿಸಿದ ಸ್ಥಳಗಳಲ್ಲಿ ವಿಗ್ರಹಗಳ ವಿಸರ್ಜನೆ ಮಾಡಬೇಕೆಂದು ಅವರು ವಿನಂತಿಸಿದರು.

ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಪರಿಸರ ಅಧಿಕಾರಿ ಶೋಭಾ ಪೋಳ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ವಿಗ್ರಹಗಳ ಬಳಕೆ, ಮಾರಾಟ ಹಾಗೂ ವಿಸರ್ಜನೆಯನ್ನು ಸರ್ಕಾರ ನಿಷೇಧಿಸಿದ್ದು ಸಾರ್ವಜನಿಕರು ಅವುಗಳ ಬಳಕೆ ಮಾಡಬಾರದು. ಮಾಲಿನ್ಯಯುಕ್ತ ಪಟಾಕಿಗಳನ್ನು ಸಿಡಿಸದೆ ಹಸಿರು ಪಟಾಕಿಯತ್ತ ಜನತೆ ಒಲವು ತೋರಿಸಬೇಕು ಎಂದರು.

ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿದ್ಧರಾಮೇಶ್ವರ ಸಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಉಪಪ್ರಾಚಾರ್ಯ ಶಿವಲೀಲಾ ಪೂಜಾರ ದೇಶದ ಜನತೆಯಲ್ಲಿ ರಾಷ್ಟ್ರೀಯತೆ, ಏಕತೆ ಹಾಗೂ ಸ್ವಾತಂತ್ರ್ಯದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಪ್ರಾರಂಭವಾದ ಸಾರ್ವಜನಿಕ ಗಣೇಶೋತ್ಸವ ಇಂದು ತನ್ನ ಮೂಲ ಸ್ವರೂಪವನ್ನು ಕಳೆದುಕೊಂಡು ಪರಿಸರದ ಪ್ರಮುಖ ಘಟಕಗಳಾದ ಜಲ, ವಾಯು ಹಾಗೂ ಮಣ್ಣು ಮಾಲಿನ್ಯ ಮಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವೈಜ್ಞಾನಿಕ ಅಧಿಕಾರಿ ಡಾ. ಜಿ. ಎಮ್. ಪಾಟೀಲ ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ವಿಜ್ಞಾನ ಕೇಂದ್ರದ ಯೋಜನಾಧಿಕಾರಿ ರಾಜಶೇಖರ ಪಾಟೀಲ ಸ್ವಾಗತಿಸಿದರು. ಕೊನೆಗೆ ಶಿಕ್ಷಕ ಮನೋಹರ ಉಳ್ಳೇಗಡ್ಡಿ ನಿರೂಪಿಸಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.