LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರೀ ಮಳೆ, ಭೂಕುಸಿತ, ಸತತ 3ನೇ ದಿನವೂ ಅಮರನಾಥ ಯಾತ್ರೆ ಸ್ಥಗಿತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ ಮತ್ತು ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆಯನ್ನು ಭಾನುವಾರವೂ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಕೂಲ ಹವಾಮಾನದ ದೃಷ್ಟಿಯಿಂದ ಇಂದು ಬೆಳಿಗ್ಗೆ ಜಮ್ಮುವಿನ ಭಗವತಿ ನಗರ ಯಾತ್ರಿ ನಿವಾಸದಿಂದ ಯಾವುದೇ ಹೊಸ ಬ್ಯಾಚ್ ಯಾತ್ರಿಗಳಿಗೆ ಅವಕಾಶ ನೀಡಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆ ಮತ್ತು ಭೂ ಕುಸಿತದಿಂದಾಗಿ ಜಮ್ಮು ಮತ್ತು ಗುಹಾ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಸಾವಿರಾರು ಯಾತ್ರಾರ್ಥಿಗಳು ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ. ಎರಡೂ ಮಾರ್ಗಗಳಲ್ಲಿ ಯಾತ್ರಿಗಳಿಗೆ ಹೆಲಿಕಾಪ್ಟರ್ ಸೇವೆಗಳು ಲಭ್ಯವಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

https://bcsuddi.com/%e0%b2%95%e0%b3%8d%e0%b2%af%e0%b2%be%e0%b2%b2%e0%b2%bf%e0%b2%ab%e0%b3%8b%e0%b2%b0%e0%b3%8d%e0%b2%a8%e0%b2%bf%e0%b2%af%e0%b2%be-%e0%b2%b5%e0%b2%bf%e0%b2%ae%e0%b2%be%e0%b2%a8-%e0%b2%aa%e0%b2%a4/

ಗುರುವಾರ ರಾತ್ರಿಯಿಂದ ಜಮ್ಮು ಮತ್ತು ಕಾಶ್ಮೀರದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ “ಯಾರೂ ಆತಂಕಕ್ಕೆ ಒಳಗಾಗಬೇಡಿ. ಹಿರಿಯ ಅಧಿಕಾರಿಗಳು ಪರಿಸ್ಥಿತಿ ಪರಿಶೀಲಿಸುತ್ತಿದ್ದಾರೆ’ ಎಂದಿದ್ದಾರೆ. ಈ ವರ್ಷದ 62 ದಿನಗಳ ಸುದೀರ್ಘ ಅಮರನಾಥ ಯಾತ್ರೆಯು ಜುಲೈ 1 ರಂದು ಪ್ರಾರಂಭವಾಯಿತು ಮತ್ತು ಶ್ರಾವಣ ಪೂರ್ಣಿಮಾ ಹಬ್ಬದ ಜೊತೆಗೆ ಆಗಸ್ಟ್ 31 ರಂದು ಕೊನೆಗೊಳ್ಳಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!