ಧುಲೆ: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಟ್ರಕ್ ವೊಂದು ಇತರೆ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಮಹಾರಾಷ್ಟ್ರದಲ್ಲಿ ನಡೆದಿದೆ.
https://bcsuddi.com/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b3%81-%e0%b2%b8%e0%b3%8d%e0%b2%aa%e0%b3%80%e0%b2%95%e0%b2%b0%e0%b3%8d-%e0%b2%95%e0%b2%9a%e0%b3%87%e0%b2%b0%e0%b2%bf%e0%b2%af/
ಈ ಸರಣಿ ಅಪಘಾತ ಗಡಿಭಾಗದ ಪಲಾಸ್ನೇರ್ ಗ್ರಾಮದ ಮುಂಬೈ- ಆಗ್ರಾ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಶಿರಪುರ ಕಾಟೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ವಂಡರ್ ಸಿಮೆಂಟ್ ಕಂಪನಿಯ ಜಲ್ಲಿ ಕಲ್ಲು ತುಂಬಿದ್ದ ಕಂಟೈನರ್ ಟ್ರಕ್ ಬ್ರೇಕ್ ಫೇಲ್ ಆಗಿ ನಿಯಂತ್ರಣ ಕಳೆದುಕೊಂಡು ಮುಂದಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ನಂತರ ಇತರ ವಾಹನಗಳ ಮೇಲೂ ಹರಿದಿದೆ. ಅಷ್ಟಕ್ಕೆ ನಿಲ್ಲದ ಅದು ಹೆದ್ದಾರಿ ಬಳಿ ಇದ್ದ ಸಣ್ಣ ಹೋಟೆಲ್ ಒಳಗೆ ನುಗ್ಗಿದೆ. ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದರು. ಗಂಭೀರ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸೇರಿಸಿದಾಗ ಮತ್ತೆ ಮೂವರು ಸಾವನ್ನಪ್ಪಿದ್ದಾರೆ.