ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು.!
ಅನಂತಪುರ: ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರದ ಅನಂತಪುರ ಜಿಲ್ಲೆಯ ಶಿಂಗನಮಲ ಎಂ.ಡಿ. ನಾಯನಪಲ್ಲಿ ಕ್ರಾಸ್‌ನಲ್ಲಿ ಘಟನೆ ನಡೆದಿದೆ.
ಕಾರು ಟೈರ್ ಒಡೆದು ನಿಯಂತ್ರಣ ತಪ್ಪಿ ಲಾರಿಯ ಕೆಳಗೆ ಬಿದ್ದಿದೆ. ಪರಿಣಾಮ, ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಅನಂತಪುರ ಇಸ್ಕಾನ್ ದೇವಸ್ಥಾನದ ಭಕ್ತರು ಎಂದು ಗುರುತಿಸಲಾಗಿದೆ. ಕೀರ್ತನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.