LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭೂ ಹಗರಣ ಪ್ರಕರಣ: ಸೊರೇನ್ ಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಿರಾಕರಣೆ

ರಾಂಚಿ: ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲು ರಾಂಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಶನಿವಾರ ನಿರಾಕರಿಸಿದೆ.

ಹೇಮಂತ್ ಸೊರೇನ್ ಅವರು ತನ್ನ ಚಿಕ್ಕಪ್ಪನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು 13 ದಿನಗಳ ಮಧ್ಯಂತರ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸೊರೇನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ.

ಸುಮಾರು 600 ಕೋಟಿ ರೂಪಾಯಿ ಮೊತ್ತದ ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಆರೋಪದಡಿ ಹೇಮಂತ್ ಸೊರೇನ್ ಅವರನ್ನು ಇ.ಡಿ ಜನವರಿಯಲ್ಲಿ ಬಂಧಿಸಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST