LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರಿನಲ್ಲಿ ಹಿಂಸಾರೂಪ ಕಾಂಗ್ರೆಸ್ ಪ್ರತಿಭಟನೆ: ಬಸ್ ಗೆ ಕಲ್ಲು ತೂರಾಟ,ಮೂವರು ಅರೆಸ್ಟ್- ಹಲವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಶಾಹುಲ್ ಹಮೀದ್, ಅನ್ವರ್, ಕಿಶೋರ್ ಶೆಟ್ಟಿ ಬಂಧಿತರು.

ಮುಖ್ಯಮಂತ್ರಿಗಳ ವಿರುದ್ಧ ಕರ್ನಾಟಕ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ.19 ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ನಗರ ಪಾಲಿಕೆಯ ಮುಂಭಾಗ ಪ್ರತಿಭಟನೆ ಮಾಡುತಿದ್ದ ಸಂದರ್ಭದಲ್ಲಿ ಮಂಗಳೂರು ನಗರ ಪಾಲಿಕೆ ಮುಂಭಾಗದ ಟ್ರಾಫಿಕ್ ಸಿಗ್ನಲ್ ನಲ್ಲಿ ಬಸ್ಸೊಂದು ಸಾರ್ವಜನಿಕರನ್ನು ಕರೆದುಕೊಂಡು ಹೋಗುವಾಗ ಯಾರೋ 10-15 ಜನ ಕಿಡಿಗೇಡಿಗಳು ಬಸ್ಸನ್ನು ತಡೆದು ಕಲ್ಲುಗಳಿಂದ ಬಸ್ಸಿನ ಮುಂಭಾಗದ ಗಾಜನ್ನು ಒಡೆದು ನಷ್ಟ ಉಂಟುಮಾಡಿದ್ದು, ಈ ಘಟನೆಗೆ ಸಂಬಂಧಿಸಿದಂತೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈಗಾಗಲೇ ಶಾಹುಲ್ ಅಮಿದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಎಂಬ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಇನ್ನುಳಿದ ಆರೋಪಿಗಳನ್ನು ಪತ್ತೆಹಚ್ಚುವ ಸಲುವಾಗಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್