LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಅಪಘಾತದ ವೇಳೆ ನೆರವಾದ ಬಾಲಕಿಯ ಸಮಯಪ್ರಜ್ಞೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಮಂಗಳೂರು: ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ.

ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ ಎಂದು ಹೇಳಿದ್ದಾರೆ.

ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದು ತಿಳಿಸಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೊಗರಿ ಬೆಳೆಗಾರರಿಗೆ ರಾಜ್ಯ ಸರಕಾರದಿಂದ ಖುಷಿ ಸುದ್ದಿ.!ನಾಗಗೊಂಡನಹಳ್ಳಿ ಶ್ರೀ ಚೆಲುಮೇರುದ್ರ ಸ್ವಾಮಿಯ ರಥೋತ್ಸವಸಾಲದಿಂದ ಮುಕ್ತಿಗೆ ಯಂತ್ರ ಮಂತ್ರ ಮತ್ತು ಪರಿಹಾರ ಇಲ್ಲಿದೆ.!ವಚನ: ಸಿದ್ಧರಾಮೇಶ್ವರ .!ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ಹಲವರಿಗೆ ವಂಚಿಸಿದ ಮಹಿಳೆ..!ಬೆಂಗಳೂರಿಗೆ ಬಿಸಿಲಾತಂಕ : ಫೆಬ್ರವರಿಯಲ್ಲೇ ಬಿಸಿಲು ಧಗೆ ಹೆಚ್ಚಳ - 42 ಡಿ.ಸೆ. ದಾಟುವ ನಿರೀಕ್ಷೆ!ರಾಜ್ಯದಲ್ಲಿ 5 ಹೊಸ ಮಿನಿ ಏರ್‌ಪೋರ್ಟ್‌ ನಿರ್ಮಾಣ..: ಎಲ್ಲೆಲ್ಲಿ ಗೊತ್ತಾ…?ಚುನಾವಣೆಯಲ್ಲಿ ಗೆದ್ದ ಬಿಜೆಪಿ: ದೆಹಲಿ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ'ಜನರ ಆದೇಶವನ್ನ ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ'- ಕೇಜ್ರಿವಾಲ್ನಿಮ್ಮಲ್ಲೇ ನೀವು ಇನ್ನಷ್ಟು ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿಬಿಡಿ!; APP- Congress ನ್ನು ಟ್ರೋಲ್ ಮಾಡಿದ ಒಮರ್ ಅಬ್ದುಲ್ಲಾ