LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್: ಅಷ್ಟಕ್ಕೂ ಅವರಿಗೆ ಹಿಂದೂ ದೈವ ದೇವರ ಮೇಲೆ ಭಕ್ತಿ ಯಾಕೆ ಗೊತ್ತಾ?

ಮಂಗಳೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ಮಂಗಳವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ತಮ್ಮ ಬರ್ತ್‌ಡೇಗೂ ಮುನ್ನ ಅವರು ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.

ನಟಿ ಕತ್ರಿನಾ ಕೈಫ್ ಮುಸ್ಲಿಂ. ಆದರೆ ಅವರು ಹಿಂದೂ ಆಗಿರುವ ವಿಕ್ಕಿ ಕೌಶಲ್ ಅವರನ್ನು ಮದುವೆಯಾಗಿದ್ದಾರೆ. ಹೀಗಾಗಿ ಅವರಿಗೆ ಹಿಂದೂ ದೇವರ ಬಗ್ಗೆ ಭಕ್ತಿ ಇದೆ. ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್. ರಾಹುಲ್ ಹಾಗೂ ನಟ ಸುನಿಲ್ ಶೆಟ್ಟಿ ಕುಟುಂಬ ಉಳ್ಳಾಲದ ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಭಾಗಿಯಾಗಿದ್ದರು.

 

ಮಹಿಳೆಯರಿಗೆ ರಾತ್ರಿ ಹೊತ್ತು ಕಟ್ಟೆಯ ಒಳಗೆ ಪ್ರವೇಶ ಇಲ್ಲದ ಕಾರಣ ಕತ್ರಿನಾ, ಅಥಿಯಾ ಮತ್ತು ರೇಷ್ಮಾ ದೈವಸ್ಥಾನದ ಹೊರಗಡೆಯಿಂದ ಕೋಲವನ್ನು ವೀಕ್ಷಿಸಿದರು. ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದರು.

 

ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲವಾದವರು. ಆಗಾಗ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಬಾಲಿವುಡ್‌ನ ಉಳಿದವರಿಗೂ ಈ ಬಗ್ಗೆ ನಂಬಿಕೆ ಮೂಡಿದೆ. ಸುನೀಲ್ ಶೆಟ್ಟಿ ಅವರು ಮಂಗಳೂರು ಮೂಲದವರು. ಅವರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಾರೆ.

ಕುತ್ತಾರುನಲ್ಲಿ ಕೊರಗಜ್ಜನ ಕೋಲ ನೀಡುವ ಮೊದಲು ಟೀಂ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್ ಮಂಗಲೂರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪತ್ನಿ ಸಮೇತರಾಗಿ ಭೇಟಿ ನೀಡಿದರು.

ದೇವಿಯ ದರ್ಶನ ಪಡೆದ ಕೆ.ಎಲ್ ರಾಹುಲ್, ಪತ್ನಿ ಆಥಿಯಾ ಶೆಟ್ಟಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕ ಗೋಪಾಲಕೃಷ್ಣ ಉಪಾಧ್ಯಾಯ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮೆಟ್ರೋ ದರ ಏರಿಕೆ ಸಂಬಂಧ ಸಿಎಂ ಪತ್ರ ಬರೆದರೆ ನಾಳೆಯೇ ಸಮಿತಿ ರಚನೆ'- ತೇಜಸ್ವಿ ಸೂರ್ಯ‘ಆತ್ಮಹತ್ಯೆ ಭಾಗ್ಯ’ ಖಂಡಿಸಿ ವಿಪಕ್ಷ ನಾಯಕರ ಪ್ರತಿಭಟನೆಆಸ್ಪತ್ರೆಯ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ, ಹಿಡಿಯಲು ಹೋದವರ ಮೇಲೆ ಗುಂಡಿನ ದಾಳಿಎಟಿಎಂಗಳಲ್ಲಿ ದಿನದ 24 ಗಂಟೆ ಸೆಕ್ಯೂರಿಟಿ ಗಾರ್ಡ್‌ಗಳ ಅಗತ್ಯವಿಲ್ಲ- ಸುಪ್ರೀಂ ಕೋರ್ಟ್SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲುಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ