ಮಂಗಳೂರು: 'ನಾನು ಮತ್ತೊಬ್ಬನೊಂದಿಗೆ ಹೋಗುತ್ತಿದ್ದೇನೆ' ಎಂದು ಪತಿಗೆ ಮೆಸೇಜ್ ಮಾಡಿ ಪತ್ನಿ ನಾಪತ್ತೆ
ಮಂಗಳೂರು: ನಗರದ ಕಾಲೇಜೊಂದರಲ್ಲಿ ಫಿಸಿಯೋಥೆರಪಿ ವ್ಯಾಸಂಗ ಮಾಡುತ್ತಿದ್ದ ಮಂಗಳಾದೇವಿ ನಿವಾಸಿ ಯುವತಿಯೋರ್ವಳು ತನ್ನ ಪತಿಗೆ ತಾನು ಮತ್ತೊಬ್ಬನೊಂದಿಗೆ ಹೋಗುತ್ತಿದ್ದೇನೆ ಎಂದು ವಾಟ್ಸಾಪ್ ಮೆಸೇಜ್ ಮಾಡಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಪ್ರಿಯಾ ರಂಜಿತ್ (25) ನಾಪತ್ತೆಯಾದ ಯುವತಿ. ಪ್ರಿಯಾ ರಂಜಿತ್ ನಗರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಫಿಸಿಯೋಥೆರಪಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಜುಲೈ 17ರಂದು ಬೆಳಗ್ಗೆ 7:45ಕ್ಕೆ ಮನೆಯಿಂದ ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದರು. ಆದರೆ ಸಂಜೆ 5 ಗಂಟೆಗೆ 'ತಾನು ಅಮಿತ್ ಎಂಬಾತನೊಂದಿಗೆ ಹೋಗುತ್ತಿದ್ದೇನೆ. ತಾಯಿ ಮತ್ತು ಮಗುವನ್ನು ಚೆನ್ನಾಗಿ ನೋಡಿಕೊಳ್ಳಿ' ಪತಿಯ ವಾಟ್ಸಾಪ್ ಮೆಸೇಜ್ ಕಳಿಸಿದ್ದಾರೆ. ಆ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇದೀಗ ಅವರು ನಾಪತ್ತೆಯಾಗಿದ್ದರೆ. ಪ್ರಿಯಾ ರಂಜಿತ್ 5.1 ಅಡಿ ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು, ಮಲಯಾಳಂ, ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಹಸುರು ಬಣ್ಣದ ಚೂಡಿದಾರ ಧರಿಸಿದ್ದರು. ಎಡಕೈಯಲ್ಲಿ ರಂಜಿತ್ ಎಂಬ ಹೆಸರಿನ ಟ್ಯಾಟೋ, ಬಲಕೈಯಲ್ಲಿ ಬಟರ್ ಫೈ ಟ್ಯಾಟೋ, ಮೂಗಿನ ಕೆಳಗೆ ಕಪ್ಪು ಮಚ್ಚೆ ಇದೆ. ಮಾಹಿತಿ ದೊರೆತವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ (0824-2220518) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.