LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಮಣ್ಣು ಗಣಿಗಾರಿಕೆ- ಉನ್ನತ ಮಟ್ಟದ ತನಿಖೆಗೆ ಗುಂಡೂರಾವ್ ಆದೇಶ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶ ಕುಸಿಯುವ ಭೀತಿ ಎದುರಾಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ಭೂ ಮಾಫಿಯಾದ ವಾಸನೆ ಇದೆ. ಉನ್ನತ ಮಟ್ಟದ ತನಿಖೆಗೆ ಆದೇಶ ನೀಡುತ್ತಿದ್ದೇನೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅಪಾಯದ ಅಂಚಿನಲ್ಲಿರುವ ಕೆತ್ತಿಕಲ್ ರಾ.ಹೆದ್ದಾರಿಯಲ್ಲಿ ಗುಡ್ಡವನ್ನು ಶುಕ್ರವಾರ ಬೆಳಗ್ಗೆ ವೀಕ್ಷಣೆ ಮಾಡಿದ ಬಳಿಕ ಸಚಿವರು ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು.

ಕೆತ್ತಿಕಲ್ ನಲ್ಲಿ ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಮಣ್ಣು ಗಣಿಗಾರಿಕೆ ಮಾಡಲಾಗಿದೆ. ದೊಡ್ಡ ಪ್ರಮಾಣದ ಲೋಪದೋಷವಾಗಿರುವುದು ಕಂಡು ಬಂದಿದೆ ಎಂದು ಸಚಿವರು ಹೇಳಿದರು. ಇಲ್ಲಿ ಗುಡ್ಡ ಅಪಾಯಕಾರಿಯಾಗಿರುವ ಬಗ್ಗೆ ಫೆಬ್ರವರಿ ತಿಂಗಳಲ್ಲೇ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಮುನ್ಸೂಚನೆ ನೀಡಿತ್ತು. ಪಾಲಿಕೆ ಯಾವ ಕ್ರಮ ಕೈಗೊಂಡಿದೆ ಎಂದು ಪರಿಶೀಲನೆ ನಡೆಸಲಾಗುವುದು. ಗಣಿ ಭೂ ವಿಜ್ಞಾನ ಇಲಾಖೆ ಮಣ್ಣು ಅಗೆಯಲು ಅವಕಾಶ ಯಾಕೆ ನೀಡಿದೆ ಎಂದು ವರದಿ ಕೇಳುತ್ತೇನೆ ಎಂದು ಸಚಿವರು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ತರಬೇತಿಯಲ್ಲಿ ಸಿಕ್ಸ್ ಪ್ಯಾಕ್ ಪ್ರದರ್ಶಿಸಿದ ವಿರಾಟ್ ಕೊಹ್ಲಿಇಂದು ದೆಹಲಿಯಲ್ಲಿ 70 ಕ್ಷೇತ್ರಗಳಿಗೆ ಚುನಾವಣೆಸ್ವೀಡನ್‌ನ ಶಾಲೆಯಲ್ಲಿ ಗುಂಡಿನ ದಾಳಿ - 11 ಜನರ ಮಾರಣಹೋಮನಿಮ್ಮ ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ..!ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!