LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು : MSEZ ಫಿಶ್ ಮಿಲ್ ನಲ್ಲಿ ಭಾರಿ ಅಗ್ನಿ ಅವಘಡ, ಕೋಟ್ಯಾಂತರ ರೂಪಾಯಿಗಳ ನಷ್ಟ

ಸುರತ್ಕಲ್: ಇಲ್ಲಿನ ಕೈಗಾರಿಕಾ ವಲಯ(ಎಂಎಸ್‌ಇಝಡ್)ದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಅಥೆಂಟಿಕ್ ಓಷನ್ ಟ್ರಶರ್‌ನಲ್ಲಿ ರವಿವಾರ ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನೌಕರರು ಯಾರು ಇರಲಿಲ್ಲ. ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಥೆಂಟಿಕ್ ಓಷನ್ ಟ್ರೆಶರ್ ಕಂಪೆನಿ ಮೀನನ್ನು ಸ್ವಚ್ಚಗೊಳಿಸಿ ಮಾಂಸದ ರೂಪಕ್ಕೆ ಪರಿವರ್ತಿಸಿ 10 ಕೆ.ಜಿ. ಯ ಪ್ಯಾಕೆಟ್‌ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿ. ಈ ಸಂಸ್ಥೆಯ ಕೋಲ್ಡ್ ಸ್ಟೋರ್ ಸೆಕ್ಷನ್ ಹಾಗೂ ಕಟ್ಟಿಂಗ್ ಸೆಕ್ಷನ್‌ಗಳಲ್ಲಿ ದುರಸ್ತಿ ಕಾರ್ಯನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬೆಂಕಿಯ ಕೆನ್ನಾಲಿಗೆಗೆ ಆಕಾಶದೆತ್ತರಕ್ಕೆ ಹೊಗೆ ಉಗುಳುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಆದರೆ ಅಗ್ನಿ ಅವಘಡದಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮೀನಿನ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ. ಸದ್ಯ ಕೈಗಾರಿಕಾವಲಯ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲ