LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನ

ಬೆಂಗಳೂರು: ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

ಬಿಇಒ ಆಂಜಿನಪ್ಪ ನೀಡಿದ ದೂರಿನನ್ವಯ ಬ್ಯಾಡರಹಳ್ಳಿ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು ಹೆಚ್​ಎಂ ಲಕ್ಷ್ಮೀದೇವಮ್ಮ ಬಂಧಿಸಿ ಇಂದು ನ್ಯಾಯಾಧೀಶರ​ ಮುಂದೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಯಾಬುದೇ ಸುರಕ್ಷತೆ ಇಲ್ಲದೇ, ಆಸಿಡ್ ನಂತಹ ಸ್ವಚ್ಚತಾ ಸಾಮಾಗ್ರಿ ಬಳಸಿ ಮಕ್ಕಳ‌ ಕೈಯಲ್ಲಿ ಶೌಚಾಲಯ ತೊಳೆಸಿದ್ದ ಸರ್ಕಾರಿ‌ ಶಾಲೆ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಸ್ಥಳೀಯ ಶಾಸಕ ಎಸ್ ಟಿ ಸೋಮಶೇಖರ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದರು.

ಈಗಾಗಲೇ ಪ್ರಕರಣದ ಗಂಭೀರತೆ ಅರಿತ ಸಚಿವರು ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸುವಂತೆ ಡಿಡಿಪಿಐಗೆ ಸೂಚಿಸಿದ್ದರು. ಈ ಹಿನ್ನಲೆ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ಅಂಜನಪ್ಪ ಅವರು, ಸ್ಥಳ ಪರಿಶೀಲನೆ ನಡೆಸಿ, ತಪ್ಪಿತಸ್ಥ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಇದೀಗ ಶಿಕ್ಷಕಿಯ ಬಂಧನವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತಂಜಲಿ ಪ್ರಕರಣದ ಜೊತೆಗೆ ಐಎಂಎ ವಿರುದ್ದ ಗರಂ ಆದ ಸುಪ್ರೀಂಕೋರ್ಟ್'ಕಾಂಗ್ರೆಸ್ ಡೇಂಜರ್’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ..!ವಯನಾಡು: ಕೇರಳದಲ್ಲಿ ಬಹಿರಂಗವಾಗಿ ನಕ್ಸಲರ ತಂಡ ಪತ್ತೆ; ಗ್ರಾಮಸ್ಥರಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕರೆ..!ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಕೆ.ಪಿ.ನಂಜುಂಡಿಮಹಿಳೆಯ ಅತಿಯಾದ ಕಾಮದಾಹಕ್ಕೆ ಅಂತ್ಯ ಹಾಡಿದ ಯುವಕ..!ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ : ಬಂಡಾಯ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ...!!ಮುಸ್ಲಿಂ ಯುವಕನಿಂದ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯ ಅಪಹರಣ...!!ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಅಗ್ನಿ ಅವಘಡ – ಹೊತ್ತಿ ಉರಿದ ಎರಡು ಕಾರುಗಳು