LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸ್ವಂತ ಜಮೀನನ್ನ ದಾನ ಮಾಡಿದ್ದೇನೆ- ಡಿಕೆಶಿ

ರಾಮನಗರ: ನಾವು ನಮ್ಮ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ಈ ದೇಹ ಇರುವುದೇ ನಮ್ಮ ಜನರಿಗಾಗಿ. ಇಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸ್ವಂತ ಜಮೀನನ್ನ ದಾನ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಕನಕಪುರದ ದೊಡ್ಡಆಲಹಳ್ಳಿಯಲ್ಲಿ ತಮ್ಮನ ಪರ ಪ್ರಚಾರ ನಡೆಸಿದ ಡಿಕೆಶಿ ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿ, ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.

ಕ್ಷೇತ್ರ ಹಿಂದೆ ಹೇಗಿತ್ತು, ಈಗ ಯಾವ ರೀತಿ ಬದಲಾವಣೆ ಮಾಡಿದ್ದೇವೆ ಎಂದು ಜನರಿಗೆ ಗೊತ್ತಿದೆ. ಅನೇಕ ಕಡೆಗಳಲ್ಲಿ ನಮ್ಮ ಆಸ್ತಿಗಳನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ನಾವು ಬಿಟ್ಟುಕೊಟ್ಟಿದ್ದೇವೆ. ನಾವು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿಲ್ಲ . ಬಿಜೆಪಿಯವರಾಗಲಿ, ಕುಮಾರಸ್ವಾಮಿ ಅವರಾಗಲಿ ಅವರ ಊರುಗಳಲ್ಲಿ ಇಂತಹ ಕೆಲಸ ಮಾಡಿದ್ದಾರಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST