LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣ - ಪ್ರಮುಖ ಆರೋಪಿ ಮನೆಗೆ ಬೆಂಕಿ

ಮಣಿಪುರ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಿದ ಭೀಕರ ಪ್ರಕರಣದ ವೀಡಿಯೊ ವೈರಲ್ ಆದ ಎರಡು ದಿನಗಳ ನಂತರ, ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಮನೆಗೆ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡ ಮಾಡಲಾಗಿದೆ ಎನ್ನಲಾಗಿದೆ. ಈ ವಿಡಿಯೋ ಈಗ ವೈರಲ್ ಆಗಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.ಈ ನಡುವೆ ಓರ್ವ ಆರೋಪಿಯ ಮನೆಗೆ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ ಎನ್ನಲಾಗಿದೆ

ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ವಯಂಪ್ರೇರಿತವಾಗಿ ದೂರು ದಾಖಲು ಮಾಡಿಕೊಂಡ ಮಣಿಪುರ ಪೊಲೀಸರು ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ವಿರುದ್ಧ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲುನಾಳೆಯಿಂದ ಮಂಗಳೂರು - ಮಡಗಾಂವ್ ವಂದೇ ಭಾರತ್‌ ರೈಲು ಆರಂಭ