LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮತದಾರರಿಗೆ ಉಚಿತ ಗ್ಯಾರಂಟಿ ಆಮಿಷ: ಜಮೀರ್‌ ಶಾಸಕತ್ವ ಅಸಿಂಧು ಅರ್ಜಿ ವಿಚಾರಣೆ ಅ.5ಕ್ಕೆ ಮುಂದೂಡಿಕೆ

ಬೆಂಗಳೂರು ಸೆಪ್ಟೆಂಬರ್ 15: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾರರಿಗೆ ಉಚಿತ ಗ್ಯಾರಂಟಿಗಳ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮ ಎಸಗಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಜಮೀರ್ ಅಹ್ಮದ್ ಖಾನ್ (ಹಾಲಿ ವಸತಿ ಸಚಿವ) ಅವರು ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅ.5ಕ್ಕೆ ಮುಂದೂಡಿದೆ.

ಈ ಕುರಿತಂತೆ ಚಾಮರಾಜಪೇಟೆ ನಿವಾಸಿ ಶಶಾಂಕ್ ಜೆ. ಶ್ರೀಧರ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ, ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ವಿಚಾರಣೆ ನಡೆಸಿದ ನ್ಯಾಯಪೀಠ, ಚುನಾವಣಾ ತಕರಾರು ಅರ್ಜಿಯ ಪ್ರತಿ ಮತ್ತು ಅರ್ಜಿಯೊಂದಿಗೆ ಸಲ್ಲಿಸಿರುವ ದಾಖಲೆಗಳನ್ನು ಜಮೀರ್‌ ಪರ ವಕೀಲರಿಗೆ ಒದಗಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಅ.5ಕ್ಕೆ ಮುಂದೂಡಿತು. ಜತೆಗೆ, ಮುಂದಿನ ವಿಚಾರಣಾ ದಿನಾಂಕದೊಳಗೆ ಅರ್ಜಿಗೆ ಲಿಖಿತ ಆಕ್ಷೇಪಣಿ ಸಲ್ಲಿಸುವಂತೆ ಜಮೀರ್‌ ಪರ ವಕೀಲರಿಗೆ ಸೂಚಿಸಿತು.

ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಕಾಂಗ್ರೆಸ್‌ ಶಾಸಕರು ಆಯ್ಕೆಯಾಗಿದ್ದಾರೆ. ಅದೇ ರೀತಿ ಜಮೀರ್ ಅಹ್ಮದ್‌ ಖಾನ್‌ ಸಹ ಚಾಮರಾಜಪೇಟೆ ಕ್ಷೇತ್ರದಿಂದ ಆಯ್ಕೆಗಿದ್ದಾರೆ. ಇದು ಚುನಾವಣಾ ಅಕ್ರಮಕ್ಕೆ ಸಮನಾಗಿದ್ದು, ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜ.6ರಂದು ಸೌರ ಮಿಷನ್ ಆದಿತ್ಯ L1 ಪಾಯಿಂಟ್‌ಗೆ ಪ್ರವೇಶಿಸಲಿದೆ - ಸೋಮನಾಥ್Coconut Rice Recipe : ಚಿತ್ರಾನ್ನದಷ್ಟೇ ರುಚಿಕರವಾದ ತೆಂಗಿನಕಾಯಿ ರೈಸ್‌ ರೆಸಿಪಿ ಒಮ್ಮೆ ಟ್ರೈ ಮಾಡಿಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್ಜೆಎನ್1 ರೂಪಾಂತರಿಗೂ ಸಿಗಲಿದೆ ಶೀಘ್ರ ಪರಿಣಾಮಕಾರಿ ಲಸಿಕೆ