LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಮತ್ತೆ ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಅದೇ ಭೀತಿ ಇದಕ್ಕೆ ಅವಕಾಶ ಕೊಡಬೇಡಿ'- ಸಿ.ಎಂ

ಸಂಡೂರು : ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ.ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾತನಾಡಿದರು.ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು.ದೇವಸ್ಥಾನದ ಬಾಗಿಲಲ್ಲಿ ಒಬ್ನೇ ನಿಂತು ಭಾಷಣ ಮಾಡಿ ಹೋಗಿದ್ದೆ. ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡೋಕೂ ಜನ ಭಯ ಬೀಳ್ತಿದ್ರು ಎಂದು ರೆಡ್ಡಿ ದರ್ಬಾರ್ ಅವಧಿಯ ಘಟನೆಗಳನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು ದಬ್ಬಾಳಿಕೆ, ದೌರ್ಜನ್ಯದ ಆ ದಿನಗಳನ್ನು ನೆನಪಿಸಿದರು.

ಅಕ್ರಮ ಗಣಿಗಾರಿಕೆ ವಿರುದ್ಧ, ರೆಡ್ಡಿ ಬ್ರದರ್ಸ್ ಬಳ್ಳಾರಿಯನ್ನು ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್ ಗೆ ಕಾಲಿಟ್ಟರೂ ಜಿಲ್ಲಾ ಮಟ್ಟದ ಅಧಿಕಾರಿಗಳೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಣಲು ಬರಲಿಲ್ಲ. ಆ ಮಟ್ಟದಲ್ಲಿ ಅಧಿಕಾರಿಗಳಲ್ಲಿ ಭಯ, ಭೀತಿ ಸೃಷ್ಟಿ ಮಾಡಿದ್ದರು.

ನಾನು ಇಬ್ರಾಹಿಂ ಚುನಾವಣಾ ಪ್ರಚಾರಕ್ಕೆ ಬಂದರೆ ಕಾರ್ಯಕ್ರಮ ಮಾಡಲು, ನನಗೆ ಭಾಷಣ ಮಾಡಲು ಜಾಗ ಕೊಡಲಿಲ್ಲ. ದೇವಸ್ಥಾನದ ಬಾಗಿಲಲ್ಲಿ ನಾನು ಭಾಷಣ ಮಾಡಿ ಹೋದೆ.ಮತ್ತೆ ಏನಾದರೂ ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಮತ್ತೆ ಅದೇ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ. ಬಿಜೆಪಿಯನ್ನು ಸೋಲಿಸಿ ಬಳ್ಳಾರಿಯನ್ನು ಉಳಿಸಿ ಎಂದು ಕರೆ ನೀಡಿದರು.

ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲೀನಿಕ್ ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ಮಾತ್ರ. ಬಿಜೆಪಿ ಅವಧಿಯಲ್ಲಿ ಲೂಟಿ ಲೂಟಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!