LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

 ಮತ್ತೊಮ್ಮೆ ಟ್ರಾಫಿಕ್‌ ದಂಡದಲ್ಲಿ ಶೇಕಡ 50ರಷ್ಟು ಡಿಸ್ಕೌಂಟ್‌..!!

ಬೆಂಗಳೂರು: ವಾಹನ ಸವಾರರಿಗೆ ಸಾರಿಗೆ ಇಲಾಖೆ ಗುಡ್‌ನ್ಯೂಸ್‌ ನೀಡಿದ್ದು, ಮತ್ತೆ ಟ್ರಾಫಿಕ್‌ ದಂಡದಲ್ಲಿ ಶೇಕಡ 50ರಷ್ಟು ಡಿಸ್ಕೌಂಟ್‌ ನೀಡಿ ಆದೇಶ ಹೊರಡಿಸಿದೆ.

ಈ ವಿಚಾರವಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಆದೇಶ ನೀಡಿದ್ದು, ಶೇ.50ರಷ್ಟು ದಂಡ ಪಾವತಿಗೆ ನವೆಂಬರ್ 21ರಿಂದ ಡಿಸೆಂಬರ್ 12ರವರೆಗೆ ದಂಡ ಕಟ್ಟಲು ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ.

ಅನೇಕ ಬಾರಿ ದಂಡ ಕಟ್ಟಿ ಎಂದು ಹೇಳಿದರೂ ಸಹ ಜನರು ಕಿವಿಗೆ ಹಾಕಿಕೊಳ್ಳುವುದಿಲ್ಲ. ಕೆಲವರ ಗಾಡಿಯನ್ನ ಚೆಕ್‌ ಮಾಡಿದರೆ 10 ಸಾವಿರ ರೂಪಾಯಿಗೂ ಹೆಚ್ಚು ದಂಡ ಇರುತ್ತದೆ. ಆದರೆ ಇದ್ಯಾವುದಕ್ಕೂ ಜನ ತಲೆಕೆಡಿಸಿಕೊಂಡಿಲ್ಲ. ಹಾಗಾಗಿಯೇ ಪೊಲೀಸರು ಹೊಸ ಐಡಿಯಾ ಮಾಡಿದ್ದಾರೆ. ಸಾಮಾನ್ಯವಾಗಿ ಜನರಿಗೆ ಡಿಸ್ಕೌಂಟ್‌ ಎಂದರೆ ಬಹಳ ಇಷ್ಟ. ಹಾಗಾಗಿ ಡಿಸ್ಕೌಂಟ್‌ ಕೊಟ್ಟ ಮೇಲಾದರೂ ಜನ ದಂಡ ಕಟ್ಟಬಹುದು ಎನ್ನುವ ಕಾರಣಕ್ಕೆ ಪೊಲೀಸರು ಆಫರ್‌ ಕೊಟ್ಟಿದ್ದು, 50 ಪರ್ಸೆಂಟ್ ಡಿಸ್ಕೌಂಟ್ ಕೊಟ್ಟಿದ್ದಾರೆ. ಇದರಿಂದಾಗಿ ಆರಾಮವಾಗಿ ದಂಡ ಕಟ್ಟಬಹುದು.

ಇನ್ನು 50% ಡಿಸ್ಕೌಂಟ್‌ ಆಫರ್‌ ಟ್ರಾಫಿಕ್‌ ಸಿಗ್ನಲ್‌ ಉಲ್ಲಂಘನೆ ಮಾಡಿರುವವರಿಗೆ ಹಾಗೂ ಮಿತಿ ಮೀರಿದ ವೇಗದ ಚಾಲನೆ, ಹೆಲ್ಮೆಟ್ ಧರಿಸದೇ ಚಾಲನೆ ಮಾಡುವುದು, ಕಾರಿನಲ್ಲಿ ಸೀಟ್ ಬೆಲ್ಟ್ ಬಳಕೆ ಮಾಡದಿರುವುದು, ಗಾಡಿ ಚಾಲನೆ ಮಾಡುವಾಗ ಮೊಬೈಲ್‌ ಫೋನ್‌ ಬಳಕೆ ಮಾಡುವುದು ಹಾಗೂ ನೋ ಪಾರ್ಕಿಂಗ್‌ ಜಾಗದಲ್ಲಿ ಪಾರ್ಕ್‌ ಮಾಡುವುದು ಹೀಗೆ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದವರಿಗೆ ಈ ಡಿಸ್ಕೌಂಟ್‌ ಅನ್ವಯವಾಗುತ್ತದೆ. ಇನ್ನು ಆಫರ್‌ ಮೂಲಕ ದಂಡ ಪಾವತಿ ಮಾಡಲು ಕರ್ನಾಟಕ ಒನ್ ವೆಬ್ ಸೈಟ್ ಹಾಗೂ ಪೇಟಿಎಂ ಬಳಕೆ ಮಾಡಬಹುದು, ಅಲ್ಲದೇ, ಹತ್ತಿರದ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ದಂಡ ಪಾವತಿ ಸಹ ಮಾಡಬಹುದಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026