E-PAPER
17 Nov 2026, 12:24:34 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು:ಸಿಎಂ.ಸಿದ್ದರಾಮಯ್ಯ.

ಸೋನಿಯಾಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಆ ಹುದ್ದೆಗೆ ಮನಮೋಹನ್ ಸಿಂಗ್ ಅವರನ್ನು ಆರಿಸಿದರು. ಹತ್ತು ವರ್ಷಗಳ ಕಾಲ ದೇಶವನ್ನು ಅತ್ಯಂತ ಸದೃಡವಾಗಿ ಮುನ್ನಡೆಸಿದರು: ಸಿ.ಎಂ.ಸಿದ್ದರಾಮಯ್ಯ

ಬೆಳಗಾವಿ-೨೭:ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಮಾತನಾಡಿದರು.

ಸಭೆಯಲ್ಲಿ ಸಿಎಂ ಮಾತುಗಳ ಹೈಲೈಟ್ಸ್...

*ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ ವಿಶ್ವಶ್ರೇಷ್ಢ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು.

ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ ಮಧ್ಯಮ ಮತ್ತು ಬಡ ಜನರ ದೃಷ್ಟಿಯಿಂದ ಈ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು.

ನಾನು ಹಲವು ಬಾರಿ ಇವರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು.

ತಾವು ಅಲಂಕರಿಸಿದ ಎಲ್ಲಾ ಹುದ್ದೆಗಳಿಗೂ ನ್ಯಾಯ ಒದಗಿಸಿದರು. RBI ಗವರ್ನರ್ ಆಗಿ, ಆರ್ಥಿಕ ಸಚಿವರಾಗಿ, ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಎಲ್ಲಾ ಹುದ್ದೆಗಳಿಗೂ ಪ್ರಾಮಾಣಿಕ ನ್ಯಾಯ ಒದಗಿಸಿದರು.

ಸೋನಿಯಾಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಆ ಹುದ್ದೆಗೆ ಮನಮೋಹನ್ ಸಿಂಗ್ ಅವರನ್ನು ಆರಿಸಿದರು. ಹತ್ತು ವರ್ಷಗಳ ಕಾಲ ದೇಶವನ್ನು ಅತ್ಯಂತ ಸದೃಡವಾಗಿ ಮುನ್ನಡೆಸಿದರು.

ಭಾರತ ಆರ್ಥಿಕ ಸಂಕಷ್ಟದಲ್ಲಿದ್ದಾಗ ಉದಾರೀಕರಣ ಜಾರಿ ಮಾಡಿ ದೇಶವನ್ನು ಆರ್ಥಿಕವಾಗಿ ಮೇಲೆತ್ತಿದರು.

ಮನಮೋಹನ್ ಸಿಂಗ್ ಅವರಿಗಿಂತ ಮೊದಲು ದೇಶದ ಆರ್ಥಿಕತೆಯನ್ನು ವಿಶ್ವ ಆರ್ಥಿಕತೆ ಜೊತೆಗೆ ಮುಕ್ತ ಮಾಡಿರಲಿಲ್ಲ. ಇವರು ಮುಕ್ತಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದರು.

*ನಮ್ಮ ಸಂವಿಧಾನದ ಮೂಲಭೂತ ಆಶಯಗಳನ್ನು ಅಕ್ಷರಶಃ ಜಾರಿ ಮಡಿದರು.

ಆಹಾರ ಭದ್ರತೆ, ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಿ ದೇಶದ ಬಡವರು, ಮಧ್ಯಮವರ್ಗದವರನ್ನು ಆರ್ಥಿಕವಾಗಿ ಮೇಲೆತ್ತುವುದರಲ್ಲಿ ಯಶಸ್ವಿಯಾದರು.

ಮನಮೋಹನ್ ಸಿಂಗ್ ಅವರ ಅಗಲಿಕೆ ಇಡೀ ವಿಶ್ವ ಆರ್ಥಿಕತೆಗೆ ಆಗಿರುವ ನಷ್ಟ.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಾವು ಆರಂಭಿಸಿದಾಗ ನಾವು ಮನಮೋಹನ್ ಸಿಂಗ್ ಅವರನ್ನು ಕರೆಸಿದ್ದೆವು. ಕರ್ನಾಟಕದ ಆರ್ಥಿಕತೆ ಬಗ್ಗೆ ಒಂದು ಕಾರ್ಯಕ್ರಮಕ್ಕೆ ನಾವು ಕರೆಸಿದ್ದೆವು. ಆಗ, ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಅತ್ಯಂದ ಸದೃಡವಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದರು. ಅವರ ಜ್ಞಾನ ಭಾರತದ ಅನೇಕ ಸಮಸ್ಯೆಗಳಿಗೆ ಪರಹಾರ ಕಂಡುಕೊಳ್ಳಲು ಸಾಧ್ಯವಾಯಿತು.

ದೇಶದ ಆರ್ಥಿಕ ಸಮಸ್ಯೆಗಳನ್ನು ನಿಖರವಾಗಿ ಗ್ರಹಿಸಿ, ಪರಿಹರಿಸುತ್ತಿದ್ದ ಅವರು ನಿಗರ್ವಿ ಆಗಿದ್ದರು. ಅತ್ಯಂತ ವಿನಯಶೀಲರಾಗಿದ್ದರು.

ನಾನು ಬದುಕಿರುವಾಗ ನನ್ನ ಕೆಲಸಗಳಿಗೆ ಹೆಚ್ಚು ಮಾನ್ಯ ಸಿಗದಿದ್ದರೂ ಮುಂದೆ ನಮ್ಮ ಕೆಲಸಗಳಿಗೆ ಹೆಚ್ಚು ಮಹತ್ವ ಸಿಗಲಿದೆ ಎಂದು ಮನಮೋಹನ್ ಸಿಂಗ್ ಅವರು ಅವತ್ತೇ ಹೇಳಿದ್ದರು‌.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.