ಮಳೆಯ ಆರ್ಭಟಕ್ಕೆ ಗೋಡೆ ಕುಸಿದು ನಾಲ್ವರ ಸಾವು.!
ದಕ್ಷಿಣಕನ್ನಡ : ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದ ಪರಿಣಾಮ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪ ಜೈನರಗುರಿಯಲ್ಲಿ ನಡೆದಿದೆ.
ಹೌದು ಈ ಒಂದು ಘಟನೆ ಇಂದು ನಸುಕಿನ ಜಾವದಲ್ಲಿ ನಡೆದಿದ್ದು, ಕುಟುಂಬದ ಸದಸ್ಯರು ಬೆಳಗಿನ ಜಾವ ನಿದ್ದೆಯಲ್ಲಿದ್ದರು ಈ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಈ ವೇಳೆ ಮಣ್ಣಿನ ಅಡಿ ಮಕ್ಕಳು ಸಿಲುಕಿಕೊಂಡಿದ್ದರು. ಅದೃಷ್ಟವಶಾತ್ ಮಣ್ಣಿನಡಿ ಸಿಲುಕಿದ ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.