LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ' ಆಯ್ಕೆಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ"ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್   15 ರ ಒಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : information [email protected] ವಿಳಾಸಕ್ಕೆ ಕಳುಹಿಸಬಹುದಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!