LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಾಮಳೆಗೆ ಮುಳುಗಿದ ವಾಣಿಜ್ಯ ನಗರ ಮುಂಬೈ- ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಮುಂಬೈ: ದೇಶದ ವಾಣಿಜ್ಯ ನಗರ ಮುಂಬೈ ಮಹಾಮಳೆಗೆ ಮುಳುಗಿದೆ. ಕೇವಲ 6 ಗಂಟೆಯ ಅವಧಿಯಲ್ಲಿ 300 ಮಿ.ಮೀ ಮಳೆಯಾಗಿದ್ದು, ಮುಂಬೈ ನಗರದ ಹಲವೆಡೆಯಲ್ಲಿ ನೀರು ನಿಂತಿದೆ. ರಸ್ತೆ, ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ 50ಕ್ಕೂ ಹೆಚ್ಚು ವಿಮಾನಗಳ ಸೇವೆ ರದ್ದಾಗಿದೆ.

ಮುಂಬೈ, ಥಾಣೆ ಪಾಲ್ಘರ್ ಮತ್ತು ಕೊಂಕಣ ಬೆಲ್ಟ್‌ಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ವಿಕ್ರೋಲಿಯ ವೀರ್ ಸಾವರ್ಕರ್ ಮಾರ್ಗ್ ಮುನ್ಸಿಪಲ್ ಸ್ಕೂಲ್ ಮತ್ತು ಎಂಸಿಎಂಸಿಆರ್ ಪೊವಾಯಿಯಲ್ಲಿ ಕಳೆದ 24 ಗಂಟೆಗಳಲ್ಲಿ 315 ಮಿ.ಮೀ ಗಿಂತಲೂ ಹೆಚ್ಚು ಮಳೆ ದಾಖಲಾಗಿದೆ.

ಹಲವಾರು ವಿಮಾನಯಾನ ಸಂಸ್ಥೆಗಳು ವಿಮಾನ ನಿಲ್ದಾಣಕ್ಕೆ ಬರುವ ಮೊದಲು ಫ್ಲೈಟ್‌ ಸ್ಟೇಟಸ್‌ ಚೆಕ್‌ ಮಾಡುವಂತೆ ಪ್ರಯಾಣಿಕರಲ್ಲಿ ಮನವಿ ಮಾಡಿವೆ. ಮುಂಬೈಯ ಹಲವು ಪ್ರದೇಶಗಳಲ್ಲಿ ಸೊಂಟದವರೆಗೆ ನೀರು ನಿಂತಿದೆ. ಮುಂಬೈ ನಗರದ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಸಮುದ್ರ ಅಲೆಗಳ ಮಟ್ಟ ಏರಿಕೆ ಆಗುತ್ತಿದ್ದು, ಮಧ್ಯಾಹ್ನ 2 ಗಂಟೆಯ ವೇಳೆಗೆ 4.4 ಮೀಟರ್‌ ಎತ್ತರಕ್ಕೆ ಏರುವ ಸಾಧ್ಯತೆಯಿದೆ. ಹೀಗಾಗಿ ಯಾರೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ದೂರದ ಊರುಗಳಿಗೆ ತೆರಳುವ ರೈಲುಗಳಿಗೆ ಸಮಸ್ಯೆಯಾಗಿದೆ. ಹಲವು ರೈಲುಗಳ ಸಂಚಾರವನ್ನು ಭಾರತೀಯ ರೈಲ್ವೇ ರದ್ದುಗೊಳಿಸಿದೆ. ಇಂದು ಮತ್ತೆ ಮುಂಬೈ ಮಹಾನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೆಲಂಗಾಣದಲ್ಲಿ ಭೀಕರ ಅಪಘಾತ : ಬಸ್ಸಿನೊಳಕ್ಕೆ ಬಿದ್ದ ಜಲ್ಲಿ ರಾಶಿಯಲ್ಲಿ ಸಿಲುಕಿ 20ಕ್ಕೂ ಅಧಿಕ ಮಂದಿ ಸಾವುವೈದ್ಯ ತನ್ನ ಗೆಳತಿಗೆ ಕಳುಹಿಸಿದ್ದ ಒಂದೇ ಒಂದು ಡಿಜಿಟಲ್ ಸಂದೇಶ, ಇಡೀ ಕೊಲೆಯ ರಹಸ್ಯ ಬಯಲು!ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಲು ಹೆಲ್ಮೆಟ್ ಬದಲು ಬಾಣಲೆ ಧರಿಸಿ ಸವಾರಿಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆಕೆ- ಸೆಟ್ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿಇತಿಹಾಸ ಬರೆದ ಭಾರತ: ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ; ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯಐಪಿಎಸ್ ಅಧಿಕಾರಿ ಪೂರ್ವಾ ಚೌಧರಿ ಯಶೋಗಾಥೆ..!!ನಿಮ್ಮ ಮನೆಗೆ ಮಾಟ-ಮಂತ್ರ ತಾಗ ಬಾರದು ಅಂದ್ರೆ ಏನು ಮಾಡಬೇಕು ಗೊತ್ತೇ?