LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಭೂಕಂಪನ- 4.5 ತೀವ್ರತೆಯಲ್ಲಿ ಕಂಪನ

ಮಹಾರಾಷ್ಟ್ರ: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು ಬೆಳಗ್ಗೆ ಭೂಕಂಪದ ಅನುಭವವಾಗಿದೆ. ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.5 ಎಂದು ಅಳೆಯಲಾಗಿದೆ. ಬೆಳಗ್ಗೆ 7.14ಕ್ಕೆ ಈ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

ಪರ್ಭಾನಿ ಮತ್ತು ನಾಂದೇಡ್‌ನಲ್ಲಿಯೂ ಭೂಕಂಪನದ ಅನುಭವವಾಗಿದೆ. ಯಾವುದೇ ಪ್ರಾಣ ಅಥವಾ ಆಸ್ತಿ ನಷ್ಟದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಈ ಹಿಂದೆ ಮಾರ್ಚ್ 21 ರಂದು ಕೂಡ ಹಿಂಗೋಲಿಯಲ್ಲಿ ಭೂಕಂಪ ಸಂಭವಿಸಿತ್ತು . 10 ನಿಮಿಷಗಳ ಅವಧಿಯಲ್ಲಿ ಭೂಮಿ ಎರಡು ಬಾರಿ ಕಂಪಿಸಿತ್ತು.

ಬೆಳಗ್ಗೆ 6.08ಕ್ಕೆ ಮೊದಲ ಭೂಕಂಪನ ಸಂಭವಿಸಿದ್ದು, 6.19ಕ್ಕೆ ಎರಡನೇ ಕಂಪನದ ಅನುಭವವಾಗಿದೆ. ಮೊದಲ ಭೂಕಂಪದ ತೀವ್ರತೆ 4.5 ದಾಖಲಾಗಿದ್ದರೆ, ಎರಡನೇ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.6 ಎಂದು ಅಳೆಯಲಾಗಿದೆ. ಭೂಕಂಪನದ ಅನುಭವವಾದಾಗ ಹೆಚ್ಚಿನ ಜನರು ಮಲಗಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST