LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಿಳಾ ಅಭಿವೃದ್ಧಿ ನಿಗಮ : ಸೌಲಭ್ಯಗಳಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: 2024-25ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ದೇವದಾಸಿ ಪುನರ್ವಸತಿ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇದ್ದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ  ನಿಗಮದ ಜಿಲ್ಲಾ ಅಭಿವೃದ್ಧಿ ನಿರೀಕ್ಷಕಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ 7019967954 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST