ಬೆಂಗಳೂರು: ರಾಜ್ಯ ಸರ್ಕಾರವು ‘ಉದ್ಯಮ ಶಕ್ತಿ’ ಎಂಬ ಯೋಜನೆಯಡಿ 100 ಸ್ಥಳಗಳಲ್ಲಿ ಪೆಟ್ರೋಲ್ ಬಂಕ್‌ಗಳನ್ನು ಸ್ಥಾಪಿಸಲಾಗುವುದು. ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
https://bcsuddi.com/%e0%b2%ae%e0%b2%a7%e0%b3%8d%e0%b2%af%e0%b2%aa%e0%b3%8d%e0%b2%b0%e0%b2%a6%e0%b3%87%e0%b2%b6%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%a6%e0%b2%b2%e0%b2%bf%e0%b2%a4%e0%b2%b0%e0%b2%bf%e0%b2%97/
ಇಂದು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಈ ವಿಚಾರ ಪ್ರಕಟಿಸಿರುವ ಅವರು, ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದೊಂದಿಗೆ ಈ ಯೋಜನೆ ರೂಪಿಸಲಾಗುವುದು ಎಂದಿದ್ದಾರೆ. ಪೆಟ್ರೋಲ್ ಬಂಕ್‌ಗಳ ಸ್ಥಾಪನೆಗೆ ಪೆಟ್ರೋಲಿಯಂ ಕಂಪನಿಗಳು ಬಂಡವಾಳ ಹೂಡಲಿವೆ. ರಾಜ್ಯ ಸರ್ಕಾರವು ಪೆಟ್ರೋಲ್ ಬಂಕ್ ಸ್ಥಾಪನೆಗೆ ಭೂಮಿ ಒದಗಿಸುವುದರೊಂದಿಗೆ ತರಬೇತಿ, ಪರವಾನಗಿ, ಮತ್ತಿತರ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ.