ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ.!
ಅಮರಾವತಿ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರದ ನಂದ್ಯಾಲದಲ್ಲಿ ಇಂದು (ಸೆ.09) ರಂದು ನಸುಕಿನ ಜಾವ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಸ್ಕಿಲ್ ಡೆವಲಪ್ಮೆಂಟ್ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ.
ಚಂದ್ರಬಾಬು ನಾಯ್ಡು ಅವರ ವಿರುದ್ಧ 58 ಕೋಟಿ ಯೋಜನೆಯ ವೆಚ್ಚವನ್ನು 371 ಕೋಟಿ ರೂ.ಗೆ ಹೆಚ್ಚಿಸಿದ ಆರೋಪ ಕೇಳಿಬಂದಿತ್ತು. ಈ ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.