LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಸಚಿವೆ, ಸಂಸದರ ಜಮೀನಿಗೂ ವಕ್ಫ್ ಭೀತಿ

ಚಿಕ್ಕೋಡಿ :ವಿಜಯಪುರದಲ್ಲಿ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಕ್ಷೇತ್ರದ ಹೊನವಾಡ ಗ್ರಾಮದ 15 ರೈತರಿಗೆ ನೋಟಿಸ್ ನೀಡಲಾಗಿತ್ತು. ನೋಟಿಸ್‌ನಲ್ಲಿ ನಿಮ್ಮ ಜಮೀನು ವಕ್ಫ್ ಆಸ್ತಿಯಾಗಿದ್ದು, ಪಹಣಿ ಪತ್ರದಲ್ಲಿ ಕಾಲಂ ನಂ 11 ಹಾಗೂ 9ರಲ್ಲಿ ಉಲ್ಲೇಖಿಸಿ, 2 ದಿನದಲ್ಲಿ ತಕರಾರು ಸಲ್ಲಿಸಲು ಸೂಚನೆ ನೀಡಲಾಗಿತ್ತು. ಇದೀಗ ವಕ್ಫ್ ಭೀತಿ ಮಾಜಿ ಸಚಿವೆ, ಮಾಜಿ ಸಂಸದರಿಗೂ ಕಾಡಲಾರಂಭಿಸಿದೆ.

ಮಾಜಿ ಸಚಿವೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತು ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಪುತ್ರ ಬಸವ ಪ್ರಸಾದ್ ಜೊಲ್ಲೆ ಮಾಲೀಕತ್ವದ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದೆ ಎಂದು ವರದಿಯಾಗಿದೆ. ಯಕ್ಸಂಬಾ ಪಟ್ಟಣದಲ್ಲಿರುವ ಜೊಲ್ಲೆ ಮಾಲೀಕತ್ವದ 3 ಎಕರೆಗಿಂತಲೂ ಹೆಚ್ಚಿನ ಜಮೀನಿನ ಮೇಲೆ ವಕ್ಫ್ ಕಣ್ಣು ಹಾಕಿದೆ.ಯಕ್ಸಂಬಾ ಪಟ್ಟಣದ ಜೊಲ್ಲೆ ಕುಟುಂಬದ ಹಲವರ ಜಮೀನುಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಎಂಬುವುದಾಗಿ ನಮೂದಾಗಿದೆ.

ವಕ್ಫ್ ವಿವಾದದ ವಿಚಾರವಾಗಿ ಕರಾಳ ದೀಪಾವಳಿ ಆಚರಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಬಳಿಕ ರೈತರಿಗೆ ನೀಡಿದ್ದ ನೋಟಿಸ್‌ನ್ನು ಜಿಲ್ಲಾಡಳಿತ ಹಿಂಪಡೆದಿತ್ತು. ಎನ್ನಲಾಗಿದೆ. ಇದೀಗ ಶಾಸಕರು ಮಾಜಿ ಸಂಸದತರಿಗೂ ನೋಟಿಸ್ ಬಂದಿರುವ ಕಾರಣ ಸರ್ಕಾರದ ಮುಂದಿನ ಕ್ರಮದ ಬಗ್ಗೆ ನಿರೀಕ್ಷಿಸಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದು.?ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್‌ನ ಹಲವೆಡೆ ಗುಡ್ಡ ಕುಸಿತ: ರಸ್ತೆಗೆ ಕುಸಿದ ಮಣ್ಣು, ಬೃಹತ್ ಬಂಡೆದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆನೀವು ಇಷ್ಟಪಟ್ಟಂತೆ ಸ್ತ್ರೀ ಪುರುಷ ಹಾಗೂ ಕುಟುಂಬದ ಸದಸ್ಯರು ನಿಮ್ಮ ಮಾತು ಕೇಳಲು ಈ ಶಕ್ತಿಶಾಲಿ ತಿಲಕವನ್ನು ಧಾರಣೆ ಮಾಡಿ .!ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ