LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿಗೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಅವರನ್ನ ಮತ್ತೆ 5 ದಿನ ಇಡಿ ಕಸ್ಟಡಿಗೆ ನೀಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

6 ದಿನಗಳ ಇ.ಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಗುರುವಾರ (ಜು.18) ವೈದ್ಯಕೀಯ ಪರೀಕ್ಷೆ ಬಳಿಕ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್, ಇನ್ನೂ ವಿಚಾರಣೆ ಬಾಕಿ ಇರುವುದರಿಂದ 8 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ಆದ್ರೆ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ 5 ದಿನಗಳ ಕಾಲ ಇ.ಡಿ ಕಸ್ಟಡಿಗೆ ಕೋರ್ಟ್ ಆದೇಶಿಸಿತು. 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಇ.ಡಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದರು.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST