LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವ-ವನ್ಯಜೀವಿ ಸಂಘರ್ಷ : ಚಾರಣ ಬಂದ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿರುವುದನ್ನು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಮಾಲತೇಶ್ ಅರಸ್ ಸ್ವಾಗತಿಸಿದ್ದಾರೆ.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಆಗುತ್ತಿರುವ ಜೀವ ಹಾನಿ ಬಗ್ಗೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ
ಮಾಲತೇಶ್ ಅರಸ್ ಅವರು ಅರಣ್ಯ ಸಚಿವರನ್ನು ಭೇಟಿ ಮಾಡಿ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಮನವಿ ಮಾಡಿದ್ದರು.

ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಸೂಚಿಸಿದ್ದಾರೆ.

ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿರುವುದು ಉತ್ತಮ ಕಾರ್ಯವಾಗಿದೆ.

ಈ ಮೂಲಕ ಮಾನವ- ವನ್ಯಜೀವಿ ಸಂಘರ್ಷ ಕಡಿಮೆಯಾಗಲು ಸಹಕಾರಿಯಾಗಲಿದೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಘಟಕ ಅಧ್ಯಕ್ಷರಾದ
ಮಾಲತೇಶ್ ಅರಸ್ ಅವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ