ಮಾಪನ ಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ 300 ಸಿಬ್ಬಂದಿಗಳ ನೇಮಕಕ್ಕೆ ರೆಡಿ.! ಕೆ.ಎಚ್. ಮುನಿಯಪ್ಪ
ಬೆಂಗಳೂರು: ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ 300 ಸಿಬ್ಬಂದಿಗಳ ನೇಮಕಕ್ಕೆ ಶೀಘ್ರ ಕ್ರಮಕೈಗೊಂಡು ಆರು ತಿಂಗಳೊಳಗೆ ಪೂರ್ವ ಪ್ರಮಾಣದಲ್ಲಿ ಭರ್ತಿ ಮಾಡಲಾಗುವುದು ಎಂದು ಆಹಾರ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ ಒಟ್ಟು 500 ಹುದ್ದೆಗಳಲ್ಲಿ 200 ಜನರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ 300 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳನ್ನು ಕೆಪಿಎಸ್ಸಿ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ಪಡೆದು ಮೂರು ತಿಂಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದರು
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.