LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಗಾರು ಮಳೆ ನೆನಪಿಸಿದ ಮತ್ತೆ ಮಳೆ ಹೊಯ್ಯುತ್ತಿದೆ ಹಾಡುಗಳು ಬಿಡುಗಡೆ

ಮುಂಗಾರು ಮಳೆ ಸಿನಿಮಾ ಜ್ಞಾಪಕ ಮಾಡಿದ ’ಮತ್ತೆ ಮಳೆ ಹೊಯ್ಯುತ್ತಿದೆ’* ಸಿನಿಮಾದ ಎರಡು ಹಾಡುಗಳ ಬಿಡುಗಡೆ ಸಮಾರಂಭವು ಉತ್ಸವ್ ಲೆಗಸಿದಲ್ಲಿ ಅದ್ದೂರಿಯಾಗಿ ನಡೆಯಿತು. ಬಹುತೇಕವಾಗಿ ಸಿನಿಮಾದ ಹಾಡುಗಳು ಮಳೆಯ ಸಿಂಚನದಲ್ಲಿಯೇ ಪತ್ರಿಕರಣ ಆಗಿರುವುದು ಸಿನಿಮಾದ ವಿಶೇಷವಾಗಿದೆ ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹವಿದೆ. ಮೂರು ದಶಕಗಳಿಂದ ಸಹಾಯಕ ಕಲಾ ನಿರ್ದೇಶಕರಾಗಿರುವ ಗಂಗಾಧರ್ ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ ಸುಮ ಹೆಸರಿನಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಶೃತಿ ಅನಿಲ್‌ಕುಮಾರ್ ಸಹ ನಿರ್ಮಾಪಕರು ಹಾಗೂ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪರಮ್‌ಗುಬ್ಬಿ ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಕಬ್ಬಡಿ ನರೇಂದ್ರಬಾಬು, ಸಂಗೀತ ಅತಿಶಯಜೈನ್ ಅವರದಾಗಿದೆ.

ಶ್ರವಣಬೆಳಗೊಳ ಶಾಸಕ ಸಿ.ಎನ್.ಬಾಲಕೃಷ್ಣ ಮತ್ತು ಹಿರಿಯ ನಿರ್ದೇಶಕ ನಾಗಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಾಗಣ್ಣ ಪ್ರಸ್ತುತ ಚಿತ್ರರಂಗವು ಎದುರಿಸುತ್ತಿರುವ ಸಮಸ್ಯೆಗಳು, ಅದಕ್ಕೆ ಪರಿಹಾರದ ಬಗ್ಗೆ ಬೆಳಕು ಚೆಲ್ಲಿದರು. ನಂತರ ಇದೇ ಬ್ಯಾನರ್‌ನಿಂದ ನಿರ್ಮಾಣವಾಗುತ್ತಿರುವ, ಕಬ್ಬಡ್ಡಿ ನರೇಂದ್ರಬಾಬು ನಿರ್ದೇಶನದ ’ಭೀಮ ತೀರದ ಹಂತಕರು’ ಸಿನಿಮಾದ ಪೋಸ್ಟರ್‌ನ್ನು ಶಾಸಕರು ಲೋಕಾರ್ಪಣೆ ಮಾಡಿದರು.
ನಿರ್ಮಾಪಕರ ಮಗ ಜಿ.ಲಿಖಿತ್ ಮತ್ತು ಎರಡು ಶೇಡ್‌ಗಳಲ್ಲಿ ಕಾಣಿಸಿಕೊಂಡಿರುವ ರಂಗಭೂಮಿಯ ಜಯವರ್ಧನ್ ನಾಯಕರುಗಳು. ನಾಯಕಿಯರುಗಳಾಗಿ ಸುಲಕ್ಷಖೈರ, ಭೂಮಿಕಗೌಡ. ಇವರೊಂದಿಗೆ ಚಂದ್ರಶೇಖರ ರೆಡ್ಡಿ.ಎ.ಎಂ, ಪ್ರಕಾಶ್‌ಮೂರ್ತಿ, ಕುಮಾರಿ ಸ್ವರ್ಣ, ಶೃತಿ, ದಿನಮಣಿ, ಕಾವ್ಯ ಕುಮಾರಿ ಮುಂತಾದವರು ಅಭಿನಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಸಾಹಿತಿ ಕೆ.ಸದಾಶಿವ ವಿರಚಿತ ಸಣ್ಣಕತೆಗಳಲ್ಲಿ ಒಂದಾದ ’ಮತ್ತೆ ಮಳೆ ಹೂಯ್ಯುತಿದೆ’ ಕೃತಿಯನ್ನು ಬಳಸಲಾಗಿದೆ. ಅವರಿಗೆ ನೀಡ ಬಹುದಾದ ಸಂಭಾವನೆ ಮೊತ್ತವನ್ನು ಸಾಹಿತ್ಯ ಪರಿಷತ್‌ನಲ್ಲಿ ದತ್ತಿಯಾಗಿ ನೀಡಿ, ಪ್ರತಿ ವರ್ಷ ಸದಾಶಿವ ಹೆಸರಿನಲ್ಲಿ ಯುವ ಬರಹಗಾರರಿಗೆ ಪ್ರಶಸ್ತಿ ನೀಡುವ ಯೋಜನೆ ಬಗ್ಗೆ ನಿರ್ಮಾಪಕರಿಗೆ ತಿಳಿಸಿದಾಗ ಖುಷಿಯಿಂದ ಒಪ್ಪಿಕೊಂಡರು. ಕಬಡ್ಡಿ ನರೇಂದ್ರಬಾಬು ಸಿನಿಮಾ ಆಗಲು ಮುಖ್ಯ ಕಾರಣರಾಗಿರುತ್ತಾರೆ.
ಚಿತ್ರವು 80ರ ದಶಕ ಹಾಗೂ 2000ನೇ ಇಸವಿಯಲ್ಲಿ ನಡೆಯುವ ಎರಡು ಕಾಲಘಟ್ಟದ ಅಂಶಗಳನ್ನು ಹೊಂದಿದೆ. ಮೊದಲನೇ ಜೋಡಿಯ ಪ್ರೇಮ ಕತೆ ವಿಪಲವಾಗುತ್ತದೆ. ಎರಡನೇ ಜೋಡಿಯ ಲವ್ ಸ್ಟೋರಿ ಯಶಸ್ಸು ಕಾಣುತ್ತದೆ. ಇವೆರೆಡರ ನಡುವೆ ಸನ್ನಿವೇಶಗಳು ಮನಸ್ಸನ್ನು ಕದಡುತ್ತದೆ. ಸಿನಿಮಾದಲ್ಲಿ ಮಳೆಯು ಮಹತ್ವದ ಪಾತ್ರವನ್ನು ವಹಿಸಿದೆ. ಜತೆಗೆ ಅರ್ಥಪೂರ್ಣ ಸಂದೇಶಗಳು ಅಲ್ಲಲ್ಲಿ ಬರುತ್ತದೆ. ಶೃಂಗೇರಿ, ಹೊರನಾಡು, ಕೊಪ್ಪ, ಹರಿಹರಪುರ, ಆಗುಂಬೆ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂಬುದಾಗಿ ಪರಮ್‌ಗುಬ್ಬಿ ಮಾಹಿತಿ ನೀಡಿದರು.
ಛಾಯಾಗ್ರಹಣ ಶಾಂತಾರಾವ್ ಇಪಿಲಿ, ಸಂಕಲನ ಧನುಷ್ ವೀರ್, ಕಲೆ ಬಾಬು ಖಾನ್, ನೃತ್ಯ ನಂದ ಅವರದಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ