ಮುಂದಿನ ತಿಂಗಳು ಜಿಜೆಪಿ ರಾಜ್ಯಧ್ಯಕ್ಷ ಬದಲಾವಣೆ .! ರಮೇಶ್ ಜಾರಕಿಹೊಳಿ
ರಾಯಚೂರು: ಮುಂದಿನ ತಿಂಗಳು ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು, ಯತ್ನಾಳ್, ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವುದು ಪಕ್ಷ ಬಲಪಡಿಸಲು ಹೊರತು ಯಾರ ವಿರುದ್ಧವೂ ಅಲ್ಲ ಎಂದು ಹೇಳಿದ್ದಾರೆ.
ಒಬ್ಬರ ನಾಯಕತ್ವದಿಂದ ಇಂದು ಈ ಸ್ಥಿತಿಗೆ ಬಂದಿದ್ದೇವೆ. ಸಾಮೂಹಿಕ ನಾಯಕತ್ವದ ಮೇಲೆ ವಿಶ್ವಾಸವಿದೆ. ವಿಜಯೇಂದ್ರ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ. ಎಂದಿಗೂ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನೆಂದು ಒಪ್ಪಿಕೊಳ್ಳುವುದಿಲ್ಲ. ಡಿಸೆಂಬರ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಮಾಡುವ ನಿರ್ಣಯವನ್ನು ಹೈಕಮಾಂಡ್ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.