LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಸೋಲುತ್ತಲೇ ಇರುತ್ತದೆ'- ಕಾಂಗ್ರೆಸ್ ನಾಯಕ ಪವನ್ ಖೇರಾ

ದೆಹಲಿ: ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಸೋಲುತ್ತಲೇ ಇರುತ್ತದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದಾರೆ.

ವಿಧಾನಸಭೆ ಉಪಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಪಕ್ಷಗಳು ಹೆಚ್ಚಿನ ಸೀಟುಗಳಲ್ಲಿ ಗೆಲುವು ಸಾಧಿಸಿದೆ. ಈ ಕುರಿತಾಗಿ ಹೇಳಿಕೆ ನೀಡಿರುವ ಅವರು, 2014 ರ ನಂತರ ಕಾಂಗ್ರೆಸ್ ಪಕ್ಷವು ಅನುಭವಿಸಿದಂತೆಯೇ ಬಿಜೆಪಿ ಚುನಾವಣಾ ಅವನತಿಯ ಹಂತವನ್ನು ಪ್ರವೇಶಿಸುತ್ತಿದೆ. ಇದು ಲೋಕಸಭೆ ಚುನಾವಣೆಯಿಂದ ಪ್ರಾರಂಭವಾದ ಟ್ರೆಂಡ್ ಮುಂದೆ ಸಾಗುತ್ತಿದೆ ಎಂದು ಹೇಳಿದರು.

ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶನಿವಾರ ನಡೆದ ಮತಗಳ ಎಣಿಕೆಯಲ್ಲಿ ಇಂಡಿಯಾ ಬ್ಲಾಕ್ ಪಕ್ಷಗಳು ಆರು ವಿಧಾನಸಭಾ ಸ್ಥಾನಗಳನ್ನು ಗೆದ್ದು ನಾಲ್ಕರಲ್ಲಿ ಮುನ್ನಡೆ ಸಾಧಿಸಿವೆ.

ಪಶ್ಚಿಮ ಬಂಗಾಳದ ರಾಯ್‌ಗಂಜ್‌, ರಣಘತ್ ದಕ್ಷಿಣ, ಬಾಗ್ಡಾ, ಮತ್ತು ಮಾನಿಕ್ತಾಲಾ, ಉತ್ತರಾಖಂಡದ ಬದ್ರಿನಾಥ್ ಮತ್ತು ಮಂಗ್ಲೌರ್, ಪಂಜಾಬ್‌ನ ಜಲಂಧರ್ ವೆಸ್ಟ್, ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್‌ಪುರ ಮತ್ತು ನಲಘರ್, ಬಿಹಾರದ ರುಪೌಲಿ, ಮಧ್ಯಪ್ರದೇಶದ ಅಮರ್ವಾರಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆದಿದೆ. ಈ ಪೈಕಿ ನಾಲ್ಕು ರಾಜ್ಯಗಳನ್ನು ಇಂಡಿಯಾ ಒಕ್ಕೂಟ ಆಡಳಿತ ನಡೆಸುತ್ತಿದೆ. ಉಳಿದ ರಾಜ್ಯಗಳಲ್ಲಿ ಬಿಜೆಪಿ ಅಥವಾ ಎನ್‌ಡಿಎ ಸರ್ಕಾರ ಆಡಳಿತ ನಡೆಸುತ್ತಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!