LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಂಬೈ ದಾಳಿ ಆರೋಪಿ ತಹಾವ್ವುರ್ ರಾಣಾ ಹಸ್ತಾಂತರಕ್ಕೆ ಅಮೇರಿಕಾ ಒಪ್ಪಿಗೆ

ವಾಷಿಂಗ್ಟನ್: 2008 ರಲ್ಲಿ ಮುಂಬೈನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಬೇಕಾಗಿದ್ದ, ಪಾಕ್ ಮೂಲದ ಕೆನಡಾ ಉದ್ಯಮಿ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕದ ಸ್ಥಳೀಯ ನ್ಯಾಯಾಲಯ ಅನುಮೋದನೆ ನೀಡಿದೆ.

ಮುಂಬೈ ದಾಳಿಗೆ ಸಂಬಂಧಿಸಿದಂತೆ ಈತನನ್ನು ಒಪ್ಪಿಸಬೇಕು ಎಂಬ ಭಾರತದ ಕೋರಿಕೆಯ ಮೇರೆಗೆ ಕಳೆದ ಜೂ. 10 ರಾಣಾನನ್ನು ಅಮೆರಿಕದಲ್ಲಿ ಬಂಧಿಸಲಾಗಿತ್ತು. ಆತನ ಹಸ್ತಾಂತರಕ್ಕಾಗಿ ಅಮೆರಿಕ ಸರ್ಕಾರಕ್ಕೆ ಭಾರತ ಮನವಿ ಮಾಡಿದ್ದು, ಇದೀಗ ನ್ಯಾಯಾಲಯ ಇದಕ್ಕೆ ಸಮ್ಮತಿ ನೀಡಿದೆ.

2008 ರಲ್ಲಿ ಮುಂಬೈ ದಾಳಿಯಲ್ಲಿ 10 ಪಾಕಿಸ್ತಾನಿ ಭಯೋತ್ಪಾದಕರು 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿದ್ದರು, ಈ ಘಟನೆಯಲ್ಲಿ 6 ಅಮೆರಿಕನ್ನರು ಸೇರಿದಂತೆ 160 ಕ್ಕೂ ಹೆಚ್ಚು ಜನರ ಮೃತಪಟ್ಟಿದ್ದರು.

ತಹವ್ವುರ್ ರಾಣಾ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ. ತನ್ನ ಬಾಲ್ಯದ ಗೆಳೆಯ ಡೇವಿಡ್ ಕೋಲ್ಮನ್ ಹೆಡ್ಲಿ, ದಾವೂದ್ ಗಿಲಾನಿ ಮತ್ತು ಇತರರಿಗೆ ಸಹಕರಿಸಿದ್ದಾನೆ. ಈ ಮೂಲಕ ಮುಂಬೈನಲ್ಲಿ ಲಷ್ಕರ್ ಭಯೋತ್ಪಾದಕ ದಾಳಿಯ ಯೋಜನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಭಾಗವಹಿಸಿದ್ದಾನೆ ಎಂದು ಭಾರತ ಆರೋಪಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರಕ್ಕೊಮ್ಮೆ ಸಿಇಒ ತಾಲ್ಲೂಕು-ಗ್ರಾಪಂ ಕಚೇರಿಗೆ ಕಡ್ಡಾಯ ಭೇಟಿ.!ಹತ್ತುದಿನದಲ್ಲಿ ತಿರುಪತಿ ತಿಮ್ಮಪ್ಪನ ಹುಂಡಿಗೆ ಎಷ್ಟು ಕೋಟಿ ಹಣ ಬಂತು.?ರೈತರು, ಬಾಳೆ ಬೆಳೆಗಾರರು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಇರುವವರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ2024 ಜನವರಿ ಸಿಂಹ ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ ಹಣಕಾಸಿನ ವಿಚಾರದಲ್ಲಿ ಚಮತ್ಕಾರವೇ ನಡೆಯುತ್ತದೆ!----ಸಿದ್ಧರಾಮೇಶ್ವರ ಅವರ ವಚನ …!ಪಾಕಿಸ್ತಾನದ 'ಭಯೋತ್ಪಾದನೆ' ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ’- ಎಸ್.ಜೈಶಂಕರ್ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರು