LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಮುಖ್ಯಮಂತ್ರಿಗಳಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಿ'- ಯಡಿಯೂರಪ್ಪ

ಬೆಂಗಳೂರು : ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮುಖ್ಯಮಂತ್ರಿಗಳದು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಆಕ್ಷೇಪಿಸಿದರು.

ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ಹೊರಡುವ ಮುನ್ನ ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಮುಖ್ಯಮಂತ್ರಿಗಳಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು. ಇದರಿಂದ ವಾಸ್ತವಿಕ ವಿಚಾರಗಳು ಹೊರಕ್ಕೆ ಬರಲು ಸಾಧ್ಯ ಎಂದು ನುಡಿದರು.

ಮುಖ್ಯಮಂತ್ರಿಗಳು ತಮ್ಮ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದಾರೆ. ಲೋಕಾಯುಕ್ತದ ಬದಲಾಗಿ ತಮ್ಮ ಕುಟುಂಬದ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಪ್ರಾಮಾಣಿಕತೆಯನ್ನು ತೋರಿಸಲಿ ಎಂದು ಒತ್ತಾಯಿಸಿದರು.

ಉಪ ಚುನಾವಣೆ ಸಂಬಂಧ ಪ್ರಶ್ನಿಸಿದಾಗ, 3ಕ್ಕೆ 3 ಕ್ಷೇತ್ರಗಳನ್ನು ಎನ್‍ಡಿಎ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಉತ್ತರ ಕೊಟ್ಟರು.ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿಯ ಹಗರಣ ನಡೆದಿದ್ದು, ಆ ಸಚಿವರು ಮತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಅವರು ಒತ್ತಾಯಿಸಿದರು.

ಲಕ್ಷ್ಮಿ ಹೆಬ್ಬಾಳ್ಕರ್ ಅವರ ಇಲಾಖೆಯಲ್ಲಿ ಅಧಿಕಾರಿ ಆತ್ಮಹತ್ಯೆ ಕುರಿತು ತನಿಖೆ ನಡೆದು ಸತ್ಯ ಹೊರಬರಲಿ; ಆಮೇಲೆ ಪ್ರತಿಕ್ರಿಯೆ ಕೊಡುವುದಾಗಿ ಹೇಳಿದರು.ರಾಜ್ಯದೆಲ್ಲೆಡೆ ವಕ್ಫ್ ಒತ್ತುವರಿ ನಡೆದಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಬೇಕಿದೆ. ಅಲ್ಲದೇ, ಸಂಬಂಧಿತ ಸಚಿವ ರಾಜೀನಾಮೆ ಕೊಡಬೇಕು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಪ್ರಕರಣ: ಸಾಮಾಜಿಕ ಹೋರಾಟಗಾರ ಜಯಂತ್ ಮತ್ತೊಂದು ದೂರು.!RSS ವಿರುದ್ಧ ದಾಳಿ ಮಾಡಿದ್ರೆ ಸಿದ್ದರಾಮಯ್ಯ ‘ಸಿಎಂ ಕುರ್ಚಿ’ ಉಳಿಯುವುದು ‘ಗ್ಯಾರಂಟಿ’!ಐದು ತಿಂಗಳ ಗರ್ಭಿಣಿ ಕೈದಿ ಆಸ್ಪತ್ರೆಯಲ್ಲಿ ಪೋಲೀಸರನ್ನು ತಳ್ಳಿ ಪರಾರಿಸ್ಯಾಂಡಲ್‌ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು!ಕರ್ನಾಟಕದಲ್ಲಿ ದ್ವಿಭಾಷಾ ಮಾದರಿಯೊಂದಿಗೆ ಹೊಸ ಶಿಕ್ಷಣ ನೀತಿ ಜಾರಿಗೆಮಂಗಳೂರು: ಕಾರಿನಲ್ಲಿ ಬಂದು ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರಶ್ರೀಲಂಕಾ ಕ್ರಿಕೆಟಿಗನಿಗೆ 5 ವರ್ಷಗಳ ನಿಷೇಧ'ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸದ ಹೊರತು ನಮ್ಮ ನಡುವೆ ಒಪ್ಪಂದವಿಲ್ಲ'- ಡೊನಾಲ್ಡ್ ಟ್ರಂಪ್‌ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಿ 18.5 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ