ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತ.!
ಬೆಂಗಳೂರು: ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಮನವಿ ಪತ್ರಗಳನ್ನು ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದ್ದರು.
ರೈತರು, ಸಾರ್ವಜನಿಕರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಸ್ವೀಕರಿಸಿದ್ದು, ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮನವಿ ಪತ್ರಗಳು ಬಿದ್ದಿವೆ. ಸಾರ್ವಜನಿಕರು, ರೈತರು ಗಂಟೆಗಟ್ಟಲೆ ಕಾದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರೂ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ.
ಇದು ದುರಂಹಕಾರದ ಪರಮಾವಧಿ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಗೆ ಬಂದಾಗ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.