LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಮುಡಾ ಗೆಬ್ಬೆದ್ದು ಹೋಗಿದೆ, ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತೇನೆ- ಸಿಎಂ

ಮೈಸೂರು: ಒಬ್ಬ ಹಿಂದುಳಿದ ವರ್ಗದವನು ಎರಡನೇ ಬಾರಿ ಸಿಎಂ ಆಗಿದ್ದನ್ನು ಸಹಿಸಲು ಕೆಲವರಿಗೆ ಆಗುತ್ತಿಲ್ಲ ಎಂದು ವಿಪಕ್ಷ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಹೊಟ್ಟೆಕಿಚ್ಚಿನಿಂದ ಕೆಲವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನನ್ನ ಮೇಲೆ ಆರೋಪ ಮಾಡಲು ಬೇರೆ ಏನೂ ಇಲ್ಲ. ಕಾನೂನಾತ್ಮಕವಾಗಿ ನಡೆದಿರುವ ವಿಚಾರವನ್ನ ಅಕ್ರಮ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನು ಹೆದರುತ್ತೀನಾ? ಇದರಿಂದ ನನ್ನನ್ನು ಹೆದರಿಸಲು ಸಾಧ್ಯನಾ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಮುಡಾ ಗೆಬ್ಬೆದ್ದು ಹೋಗಿದೆ. ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತೇನೆ. ಮುಡಾ ಹಗರಣದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ‌. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕಾಲದಲ್ಲೂ ತಪ್ಪುಗಳು ಆಗಿದೆ. ಬಿಜೆಪಿ ಕಾಲದಲ್ಲೇ ಹೆಚ್ಚು ತಪ್ಪಾಗಿರುವುದು. ಅದನ್ನ ಸರಿಪಡಿಸುತ್ತೇನೆ ಎಂದು ತಿಳಿಸಿದ್ದಾರೆ.
ನಮ್ಮ ಪತ್ನಿಗೆ ಸೈಟ್ ಕೊಟ್ಟಿರುವ ವಿಚಾರ ಇಟ್ಟುಕೊಂಡು ಬೇರೆ ಅಕ್ರಮ ಮಾಡಲು ಸಾಧ್ಯವಿಲ್ಲ. ನಮ್ಮದು ಅಕ್ರಮವೇ ಅಲ್ಲ. ಆ ಪ್ರಕರಣವೇ ಬೇರೆ, ಈಗ ನಡೆದಿರುವ ಪ್ರಕರಣಗಳೇ ಬೇರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮುಡಾ ಹಗರಣದ ವಿರುದ್ಧ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಅವರು ರಾಜಕೀಯ ಕಾರಣಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ರಾಜಕೀಯ ಮಾಡುವುದಾದರೇ ನಾವು ರಾಜಕೀಯವಾಗಿ ಹೆದರಿಸುತ್ತೇನೆ, ನೋಡ್ತಾ ಇರಿ. ರಾಜಕೀಯವಾಗಿ ಅದಕ್ಕೆ ಉತ್ತರ ಕೊಡುತ್ತೇನೆ ಎಂದಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!