LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಹಗರಣ: ಮತ್ತಷ್ಟು ದಾಖಲೆ ಬಹಿರಂಗ

ಬೆಂಗಳೂರು: ಮುಡಾ ನಿವೇಶನ ಪಡೆದುಕೊಳ್ಳುವಲ್ಲಿ ನಾನಾಗಲಿ ನನ್ನ ಕುಟುಂಬವಾಗಲಿ. ಯಾವುದೇ ಪ್ರಯತ್ನ ಮಾಡಿಲ್ಲ. ಇದರಲ್ಲಿ ನಮ್ಮ ಯಾವುದೇ ಪಾತ್ರ ಇಲ್ಲ ಎಂದು ಪತ್ರ ಬರೆದಿದ್ದ ಸಿಎಂ ಖಂಡತುಂಡವಗಿ ಹೇಳಿದ್ದರು. ಆದರೆ ಸಿಎಂ ಹೇಳಿಕೆಯನ್ನು ಬುಡಮೇಲು ಮಾಡುವಂತೆ ಒಂದೊಂದೇ ದಾಖಲೆಗಳು ಆಚೆ ಬರುತ್ತಿವೆ. 2014ರಲ್ಲಿ ಸಿದ್ದರಾಮಯ್ಯ ಪತ್ನಿ ಮುಡಾಗೆ ಮನವಿ ಸಲ್ಲಿಸಿ, ನನ್ನ ಜಮೀನಿನಲ್ಲಿ ಮುಡಾ ನಿವೇಶನ ಮಾಡಿ ಹಂಚಿದೆ. ಇದಕ್ಕೆ ಪರಿಹಾರ ನೀಡುವಂತೆ ಕೋರಿದ್ದರು. ಈ ವೇಳೆ ಮಾರುಕಟ್ಟೆ ದರ ಅಥವಾ 40:60 ಅನುಪಾತದಲ್ಲಿ ಪರಿಹಾರ ನೀಡಲು ಮುಡಾ ನಿರ್ಧರಿಸಿತ್ತು. ಇದಕ್ಕೆ ಪಾರ್ವತಿಯವರು ಬದಲಿ ಜಮೀನಿನನ್ನೇ ಕೊಡಬೇಕೆಂದು ಒತ್ತಾಯಿಸಿದ್ದರು. ಈ ಕುರಿತು ಸಭೆಯ ನಡಾವಳಿಯಲ್ಲಿ ನಮೂದಾಗಿದೆ. ಈ ಹಿಂದೆ ಮುಡಾಗೆ ಪತ್ನಿ ಪತ್ರವನ್ನೇ ಬರೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿಯೇ ತಿಳಿಸಿದ್ದರು. ಆದರೆ ಪತ್ನಿ ಮುಡಾಗೆ ಪತ್ರ ಬರೆದ ಬಗ್ಗೆ ರಾಜ್ಯಪಾಲರಿಗೆ ನೀಡಿದ ಉತ್ತರದಲ್ಲಿ ಸಿಎಂ ಉಲ್ಲೇಖಿಸಿದ್ದರು. ಇನ್ನೊಂದು ಮುಡಾದ ತಿಳಿವಳಿಕೆ ಪತ್ರದಲ್ಲಿ, ಪಾರ್ವತಿಯವರ ಕೋರಿಕೆ ಪತ್ರದ ಬಗ್ಗೆ ಉಲ್ಲೇಖಿಸಿ, 50:50 ಅನುಪಾತದಲ್ಲಿ ನಿವೇಶನ ಕೊಡಬೇಕೆಂಬ ಕೋರಿಕೆಯ ಕುರಿತು ಪ್ರಸ್ತಾಪಿಸಿ, 3.16 ಎಕರೆ ಜಮೀನಿಗೆ ಸಂಬಂಧಿಸಿದ ಹಕ್ಕು ದಾಖಲಾತಿಗಳನ್ನು ಹಾಜರುಪಡಿಸಿ ಮೂರು ದಿನದೊಳಗೆ ಪರಿತ್ಯಾಜನಾ ಪತ್ರ ಮಾಡಿಸಿಕೊಡುವಂತೆ ಹಾಗೂ ಮೂಲ ದಾಖಲಾತಿಗಳನ್ನು ಹಾಜರುಪಡಿಸಿ ಪ್ರಾಧಿಕಾರದ ಸುಪರ್ದಿಗೆ ಸಲ್ಲಿಸುವಂತೆ ಮುಡಾ ವಿಶೇಷ ಭೂಸ್ವಾಧೀನಾಧಿಕಾರಿ ಪಾರ್ವತಿ ಅವರಿಗೆ ಸೂಚಿಸಿದ್ದರು. ಇದೇ ರೀತಿ ಮುಡಾ ನಡಾವಳಿಯ ಇನ್ನೊಂದು ಕಂತಿನ ದಾಖಲೆ ಇಷ್ಟರಲ್ಲೇ ಬಿಡುಗಡೆಯಾಗಲಿದೆ. ಈಗಾಗಲೇ ವೈಟ್ನರ್ ಬಳಕೆ ಮಾಡಿದ ದಾಖಲೆ ಹರಿದಾಡುತ್ತಿದ್ದು ಮತ್ತೊಂದು ದಾಖಲೆಯಲ್ಲಿ ಮೃತ ವ್ಯಕ್ತಿ ಹೆಸರಿನಲ್ಲಿ ಭೂಸ್ವಾಧೀನ ಮಾಡಿರುವುದಕ್ಕೆ ಸಂಬಂಧಿಸಿದ ದಾಖಲೆ ಬಹಿರಂಗವಾಗಿದೆ. ಇನ್ನು ಇದೇ ವಿಚಾರ ಇಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾ