LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಹಗರಣ ಸಿದ್ದರಾಮಯ್ಯ ಜೈಲಿಗೆ ಹೊಗುತ್ತಾರೆ.! ಭವಿಷ್ಯ ನುಡಿದ ಜಗದೀಶ್ ಶೆಟ್ಟರ್.!

ಬೆಳಗಾವಿ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಅವರು ಸ್ಪೋಟಕ ಭವಿಷ್ಯ ಹೇಳಿದ್ದಾರೆ.!

ಬೆಳಗಾವಿ ಗ್ರಾಮೀಣ ಘಟಕದ ಬಿಜೆಪಿ ಕಚೇರಿ ಉದ್ಘಾಟಿಸಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮುಡಾ ಪ್ರಕರಣದ ಎಲ್ಲ ದಾಖಲೆಗಳನ್ನು ನೋಡಿದ್ದೇನೆ. ಇದರಲ್ಲಿ ನಿಯಮ ಉಲ್ಲಂಘಿಸಿರುವುದು ಮತ್ತು ಸಿದ್ದರಾಮಯ್ಯನವರೇ ಅಕ್ರಮದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸ್ಪಷ್ಟ. ನಾನು ಒಬ್ಬ ವಕೀಲನಾಗಿ ಹೇಳುತ್ತಿದ್ದೇನೆ, ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ. ಅವರಿಗೆ ಶಿಕ್ಷೆಯಾಗಲಿದೆ ಎಂದು ಭವಿಷ್ಯ ನುಡಿದರು.

ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದಕ್ಕೆ ಬಹಳಷ್ಟು ಖುಷಿ ಪಡೋರು ಕಾಂಗ್ರೆಸ್ ನಾಯಕರೇ ಹೆಚ್ಚು. ನಾವು ಸಿದ್ದರಾಮಯ್ಯ ಹಿಂದೆ ಇದ್ದೇವೆ, ಅವರ ಹೋರಾಟಕ್ಕೆ ಬೆಂಬಲಿಸುತ್ತೇವೆ ಎನ್ನುವವರು, ಒಳಗೊಳಗೆ ಖುಷಿ ಪಡೋರು ಕಾಂಗ್ರೆಸ್ ನಾಯಕರು. ಅದರ ಪರಿಣಾಮ ಸ್ವಲ್ಪದರಲ್ಲೇ ಗೊತ್ತಾಗುತ್ತದೆ.ಅಕ್ಕಪಕ್ಕದವರೇ ದಾಖಲೆ ಬಿಡುಗಡೆ ಮಾಡಿದ್ದರೆಂದು ನಾನು ಯಾಕೆ ಹೇಳಲಿ? ಅದು ಈಗ ಹೊರಗಡೆಗೆ ಬಂದಿದೆ, ಖುಷಿ ಪಡೋರು ಜಾಸ್ತಿ ಇದ್ದಾರೆ ಎಂದರು.

ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯರು ತಕ್ಷಣ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಿತ್ತು. ಈವರೆಗೆ ರಾಜೀನಾಮೆ ನೀಡುತ್ತಿಲ್ಲ. ಸಿಎಂ ಹುದ್ದೆಯಲ್ಲಿ ಇರಲು ಸಿದ್ದರಾಮಯ್ಯ ಅವರು ಅನರ್ಹ. ರಾಜ್ಯಪಾಲರ ನಿರ್ಧಾರಗಳು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್​ನಲ್ಲಿ ಅಂಗೀಕಾರವಾಗಿವೆ ಎಂದು ಶೆಟ್ಟರ್ ಸಮರ್ಥಿಸಿಕೊಂಡರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತ