LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಹಗರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿದ್ದರಾಮಯ್ಯ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳು ತುರ್ತು ವಿಚಾರಣೆಯ ಅಗತ್ಯವಿದೆಯೇ ಎಂದು ಸಿಎಂ ಪರ ವಕೀಲರನ್ನು ಪಶ್ನಿಸಿದ್ದು, ಹೌದು ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ ನವೆಂಬರ್ 23ಕ್ಕೆ ವಿಚಾರಣೆ ನಡೆಸಬೇಕೆಂದು ವಕೀಲರು ತಿಳಿಸಿದ್ದಾರೆ. ಈ ಹಿನ್ನಲೆ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್ ವಿಭಾಗೀಯಪೀಠ ನಿಗದಿಪಡಿಸಿದೆ ಎಮದು ತಿಳಿದುಬಂದಿದೆ.

ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಮಾಡಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ.

ಡಿಸೆಂಬರ್ 24ರ ಒಳಗೆ ತನಿಖಾ ವರದಿ ಸಲ್ಲಿಸಲು ನಿರ್ದೇಶಿಸಿತ್ತು. ಆ ಬಳಿಕ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರು ಆಕ್ಷೇಪಾರ್ಹವಾದ 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರು. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 24ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದಾದ ಸರಿಸುಮಾರು ಒಂದು ತಿಂಗಳ ಬಳಿಕ ವಕೀಲ ಶತಭಿಷ್ ಶಿವಣ್ಣ ಅವರ ಮೂಲಕ ಮೇಲ್ಮನವಿ ಸಲ್ಲಿಸಲಾಗಿತ್ತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದು.?ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್‌ನ ಹಲವೆಡೆ ಗುಡ್ಡ ಕುಸಿತ: ರಸ್ತೆಗೆ ಕುಸಿದ ಮಣ್ಣು, ಬೃಹತ್ ಬಂಡೆದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆನೀವು ಇಷ್ಟಪಟ್ಟಂತೆ ಸ್ತ್ರೀ ಪುರುಷ ಹಾಗೂ ಕುಟುಂಬದ ಸದಸ್ಯರು ನಿಮ್ಮ ಮಾತು ಕೇಳಲು ಈ ಶಕ್ತಿಶಾಲಿ ತಿಲಕವನ್ನು ಧಾರಣೆ ಮಾಡಿ .!