ಮುಸ್ಲಿಂ ಲೀಗ್ ಪ್ರತಿಭಟನೆಯಲ್ಲಿ ವಿವಾದಾತ್ಮಕ ಘೋಷಣೆ : ‘ದೇಗುಲದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’
ಕಾಸರಗೋಡು ಜಿಲ್ಲೆಯ ಕಾಞಂಗಾಡ್‌ನಲ್ಲಿ ಮುಸ್ಲಿಂ ಲೀಗ್‌ನಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರನೊಬ್ಬ ‘ದೇವಸ್ಥಾನದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಡಿಯೋ ವಿವಾದಾತ್ಮಕ ಸ್ವರೂಪ ಪಡೆದುಕೊಂಡಿದೆ. ಹೌದು ಮಣಿಪುರದಲ್ಲಿ ನಡೆದ ಹಿಂಸಾಚಾರದ ವಿರುದ್ಧದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ಭಾಗವಾಗಿರುವ ಮುಸ್ಲಿಂ ಲೀಗ್ ಸದಸ್ಯರು ನಡೆಸಿರುವ ಪ್ರತಿಭಟನೆಯಲ್ಲಿ ವಿವಾದಾತ್ಮಕ ಘೋಷಣೆಗಳು ಮೊಳಗಿದ ಆರೋಪ ಕೇಳಿ ಬಂದಿದೆ. ಸದ್ಯ ಘೋಷಣೆ ಎತ್ತಿದವನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಈವರೆಗೆ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.