ಮುಸ್ಲಿಮರನ್ನು ಕಂಡರೆ ಯಾಕೆ ದ್ವೇಷ? ಮುಸ್ಲಿಮರ ಮನದ ಮಾತನ್ನೂ ಕೇಳಿ ಪ್ರಧಾನಿ ಮೋದಿಯವರೇ - ಮೌಲ್ವಿ ಮನವಿ
ನವದೆಹಲಿ : ಭಾರತದಲ್ಲಿ ಹಿಂದೂ ಮುಸ್ಲಿಮರ ನಡುವಿನ ಸಂಬಂಧ ಅಪಾಯದಲ್ಲಿದೆ. ದೇಶದಲ್ಲಿ ಏಕೆ ಮುಸ್ಲಿಮರನ್ನ ಕಂಡರೆ ಇಷ್ಟೊಂದು ದ್ವೇಷ? ಪ್ರಧಾನಿ ಮೋದಿ ಅವರು ಭಾರತೀಯ ಮುಸ್ಲಿಮರ ಮನದ ಮಾತನ್ನೂ ಕೇಳಿ, ಅವರ ಸಮಸ್ಯೆಗಳನ್ನ ಬಗೆಹರಿಸಬೇಕು ಎಂದು ಜಾಮಾ ಮಸೀದಿಯ ಮೌಲ್ವಿ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಮನವಿ ಮಾಡಿದ್ದಾರೆ. ವಿಶ್ವದಲ್ಲಿ 57 ಮುಸ್ಲಿಂ ರಾಷ್ಟ್ರಗಳಿವೆ, ಅಲ್ಲಿ ಮುಸ್ಲಿಮೇತರರೂ ಇದ್ದಾರೆ. ಅಲ್ಲಿ ಯಾರಿಗೂ ತೊಂದರೆ ಆಗುತ್ತಿಲ್ಲ. ಆದ್ರೆ, ಭಾರತದಲ್ಲಿ ಮಾತ್ರ ಇಷ್ಟೊಂದು ದ್ವೇಷ ಯಾಕೆ ಎಂದು ಪ್ರಶ್ನಿಸಿದ್ದಾರೆ. ಹರಿಯಾಣದ ನುಹ್ ಜಿಲ್ಲೆಯ ಗಲಭೆಗಳು ಹಾಗೂ ಚಲಿಸುತ್ತಿದ್ದ ರೈಲಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣಗಳನ್ನ ಉಲ್ಲೇಖಿಸಿ ಜಾಮಾ ಮಸೀದಿಯಲ್ಲಿ ನಡೆದ ಧರ್ಮೋಪದೇಶದಲ್ಲಿ ಮಾತನಾಡಿದ್ದಾರೆ. ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಸ್ಲಿಂ ಸಮುದಾಯದ ಬುದ್ಧಿಜೀವಿಗಳೊಂದಿಗೆ ಸಂವಾದ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ. ದೇಶದ ಪರಿಸ್ಥಿತಿ ಚಿಂತಾಜನಕವಾಗಿದೆ. ದ್ವೇಷದ ಅಲೆಗಳು ದೇಶದ ಶಾಂತಿ ಮತ್ತು ಭದ್ರತೆಗೆ ಅಪಾಯವನ್ನುಂಟು ಮಾಡುತ್ತಿವೆ. ಮೋದಿ ಅವರೇ ನೀವು ಮನ್ ಕಿ ಬಾತ್ ಹೇಳುತ್ತೀರಿ, ಅದೇ ರೀತಿ ಮುಸ್ಲಿಮರ ಮನ್ ಕಿ ಬಾತ್ ಅನ್ನೂ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.