ಬಂಟ್ವಾಳ: ಬಂಟ್ವಾಳದ ಸಾವದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ದಾವೂದ್ ಅಮೀರ್, ಅಬ್ದುಲ್ ರಹೀಜ್, ಬಂಟ್ವಾಳದ ಕಾವಲ ಮೂಡೂರು ಗ್ರಾಮದ ಆಫ್ರಿದಿ, ಮಹಮ್ಮದ್ ಇರ್ಷಾದ್ ಎಂದು ಗುರುತಿಸಲಾಗಿದೆ.
ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವರನ್ನು2 ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ನಾಲ್ವರನ್ನು ಭಾನುವಾರ ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದಂತಾಗಿದೆ.
https://bcsuddi.com/%e0%b2%89%e0%b2%a1%e0%b3%81%e0%b2%aa%e0%b2%bf-%e0%b2%a6%e0%b3%87%e0%b2%b5%e0%b2%b8%e0%b3%8d%e0%b2%a5%e0%b2%be%e0%b2%a8%e0%b2%a6-%e0%b2%86%e0%b2%ad%e0%b2%b0%e0%b2%a3-%e0%b2%95%e0%b2%b3%e0%b2%b5/
ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.