LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ

ಚಿಕ್ಕಮಗಳೂರು: ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಡೂರು ಮೂಲದ ಮೃತ ನಿಂಗನಾಯಕ್ ಅವರು ಕಳೆದ ಎರಡು ವರ್ಷಗಳಿಂದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗಿತ್ತು ಹಾಗೂ ಡಿ ದರ್ಜೆ ನೌಕರರು ಕಡಿಮೆ ಇದ್ದಾರೆ. ಎಲ್ಲಾ ಕೆಲಸ ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮನೆಯಲ್ಲಿ ನಿದ್ದೆ ಬರುತ್ತಿರಲಿಲ್ಲ ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ.

ಕಳೆದ ಒಂದು ವಾರದ ಹಿಂದೆಯಷ್ಟೇ ಬಿಇಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದು ಸುದ್ದಿಯಲ್ಲಿತ್ತು. ಇಲ್ಲಿನ BEO ಹೇಮಂತ್ ರಾಜ್ ಸಿಕ್ಕಿಬಿದ್ದಿದ್ದರು.

ಅನುಕಂಪದ ಆಧಾರದ ಮೇಲೆ ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ಬಿಇಒ ಹೇಮಂತ್ ರಾಜ್ ದ್ವಿತೀಯ ದರ್ಜೆ ಸಹಾಯಕರೊಬ್ಬರ ಮೂಲಕ ಬಿಇಒ 15 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು ಇದರಿಂದ ನೊಂದ ಚಿಕ್ಕಮಗಳೂರು ನಗರದ ಮಹಿಳೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು

ಈ ಘಟನೆ ನಡೆದ ವಾರಕ್ಕೆ ನಿಂಗರಾಜ್ ಆತ್ಯಹತ್ಯೆಗೆ ಶರಣಾಗಿದ್ದಾರೆ. ಸದ್ಯ ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇ 20ರವರೆಗೆ ಕೇರಳದ ಕೆಲವು ರಾಜ್ಯಗಳಿಗೆ ರೆಡ್ ಅಲರ್ಟ್‌ ಘೋಷಣೆಮಾಲಿವಾಲ್ ಮೇಲೆ ಹಲ್ಲೆ ಕೇಸ್‌-ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ 5 ದಿನ ಕಸ್ಟಡಿಗೆಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಕೋರ್ಟ್ವಾಹನ ಸವಾರರೇ ಗಮನಿಸ - ಜೂನ್ 1ರಿಂದ ಚಾಲನಾ ಪರವಾನಿಗೆ ನಿಯಮ ಬದಲಾವಣೆ'ದೇವರಾಜೇಗೌಡ ಮೋಸ್ಟ್ ಕ್ರಿಮಿನಲ್ ಮ್ಯಾನ್'- ಶಿವರಾಮೇಗೌಡಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ- ಬಿಜೆಪಿಯ ಮಾಜಿ ಸರ್ಪಂಚ್‌ ಬಲಿ, ದಂಪತಿಗೆ ಗಾಯಮಂಗಳೂರು: ಶಬರಿಮಲೆ ಯಾತ್ರಾರ್ಥಿ ಕೇರಳದಲ್ಲಿ ಹೃದಯಾಘಾತದಿಂದ ಸಾವು..!ಪ್ರಧಾನಿ ನರೇಂದ್ರ ಮೋದಿ ಹೊಸ ಬಯೋಪಿಕ್ ​: ಮೋದಿ ಪಾತ್ರದಲ್ಲಿ ಕಟ್ಟಪ್ಪ?ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ- ಪ್ರಯಾಣಿಕರು ಅಪಾಯ ಪಾರುಕಿರ್ಗಿಸ್ತಾನ್‌ನಲ್ಲಿ ಭಾರತ, ಪಾಕ್ ವಿದ್ಯಾರ್ಥಿಗಳ ಮೇಲೆ ಹಲ್ಲೆ