ಮೂರು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ..!
ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು, ಕರಾವಳಿಯಲ್ಲಿ ಮುಂದಿನ ಮೂರು ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಅಂತ ತಿಳಿಸಿದೆ. ಇಂದಿನಿಂದ ಮೂರು ದಿನಗಳು ಅಂದರೇ ಜುಲೈ.4ರವರೆಗೆ ಭಾರೀ ಮಳೆಯಾಗಲಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಗಾಳಿ ಜಾಸ್ತಿ ಇರಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳುರು ಜಿಲ್ಲೆಗೆ ಯೆಲ್ಲೋ ಹಾಗೂ ಶಿವಮೊಗ್ಗಕ್ಕೆ ಮೊದಲ ದಿನ ಆರೆಂಜ್ ಹಾಗೂ ಮೂರನೇ ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.