LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೃತ ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೋ ಬಿಡುಗಡೆ ಮಾಡಿದ ಉಗ್ರರು

ಶ್ರೀನಗರ: ಇತ್ತೀಚೆಗೆ ಜಮ್ಮುವಿನ ದೋಡಾದಲ್ಲಿ ನಡೆದ ದಾಳಿಯ ಬಳಿಕದ ಘಟನೆಗಳನ್ನು ತೋರಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದರಲ್ಲಿ ಪಾಕಿಸ್ತಾನ ಮೂಲದವರು ಎನ್ನಲಾದ ಭಯೋತ್ಪಾದಕರು ಮೃತ ಸೈನಿಕನ ಶಿರಚ್ಛೇದ ಮಾಡಲು ಯತ್ನಿಸುತ್ತಿರುವುದನ್ನು ಕಂಡು ಬಂದಿದೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ ನ 'ಕಾಶ್ಮೀರ ಟೈಗರ್ಸ್' ಇತ್ತೀಚೆಗೆ ಜಮ್ಮುವಿನ ದೋಡಾದಲ್ಲಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸೇನಾಧಿಕಾರಿ ಮತ್ತು ಇತರ ಮೂವರು ಸೈನಿಕರು ಹುತಾತ್ಮರಾಗಿದ್ದರು. ಈ ದಾಳಿಯ ಬಳಿಕದ ಘಟನೆಯ ವಿಡಿಯೋದಲ್ಲಿ ಭಯೋತ್ಪಾದಕರು ಮೃತ ಸೈನಿಕನ ಶಿರಚ್ಛೇದ ಮಾಡಲು ಯತ್ನಿಸುತ್ತಿರುವುದು ಕಂಡುಬಂದಿದೆ. ಜೊತೆಗೆ ಈ ವಿಡಿಯೋದಲ್ಲಿ 'ಕೆಲವು ದಿನಗಳ ಹಿಂದೆ ನಡೆದ ಎನ್‌ಕೌಂಟರ್‌ನಲ್ಲಿ ಮೃತ ಭಯೋತ್ಪಾದಕನ ದೇಹವನ್ನು ಸೈನಿಕರು ಎಳೆದೊಯ್ದಿದ್ದಕ್ಕೆ ಪ್ರತಿಕಾರವಾಗಿ ಈ ಕೃತ್ಯ ಎಸಗಲಾಗಿದೆ' ಎಂದು ಭಯೋತ್ಪಾದಕರ ಗುಂಪು ತಿಳಿಸಿದೆ.

ಇನ್ನು ಜೊತೆಗೆ ಘಟನೆಯ ಸಮಯದಲ್ಲಿ ಸೈನಿಕರಿಂದ ನಾವು ಶಸ್ತಾçಸ್ತçಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಭಯೋತ್ಪಾದಕರು ಹೇಳಿದ್ದಾರೆ. ಅದರಂತೆ ಭಯೋತ್ಪಾದಕರು ಹಂಚಿಕೊಂಡಿರುವ ವಿಡಿಯೋದಲ್ಲಿ ಎಕೆ - 47 ಅನ್ನು ಕೂಡ ವಿಡಿಯೊದಲ್ಲಿ ಕಂಡು ಬಂದಿದೆ ಎಂದು ಹೇಳಲಾಗಿದೆ. ಇನ್ನು ಈ ವಿಡಿಯೋವನ್ನು ಸೇನಾ ಮೂಲಗಳು ಪರಿಶೀಲಿಸುತ್ತಿವೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆ