LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ

 

ಚಿತ್ರದುರ್ಗ:ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ (ಪಿಯುಸಿ ಮತ್ತು ಪಿಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) 2024-25ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗ, ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಥಿಗಳು https://shp.karnataka.gov.in/bcwd ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ ವರ್ಗದ ವಾರ್ಷಿಕ ಆದಾಯ 2.50 ಲಕ್ಷ, ಹಾಗೂ ಪ್ರವರ್ಗ-2ಎ, 2ಬಿ,3ಎ, 3ಬಿ, ಇತರೆ ಹಿಂದುಳಿದ ವರ್ಗಗಳ ವಾರ್ಷಿಕ ಆದಾಯ ರೂ. 1 ಲಕ್ಷ ಮೀರಿರಬಾರದು.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/  ನ್ನು ಪರಿಶೀಲಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ದೋಷಗಳು ಉಂಟಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ, ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ  8050770004, 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !